ಬಜೆಟ್‌ ಪ್ರತಿಯೊಂದಿಗೆ ರಾಷ್ಟ್ರಪತಿ ಭವನಕ್ಕೆ ಬಂದ ನಿರ್ಮಲಾ ಸೀತಾರಾಮನ್‌

Prasthutha|

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಬೆಳಗ್ಗೆ 11 ಗಂಟೆಗೆ 2022-23ನೇ ಸಾಲಿನ ಬಜೆಟ್‌ ಮಂಡಿಸಲಿದ್ದು, ಇದಕ್ಕೂ ಮುನ್ನ ಹಣಕಾಸು ಸಚಿವಾಲಯದಿಂದ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದಾರೆ. ರಾಷ್ಟ್ರಪತಿ ಭವನಕ್ಕೆ ತೆರಳಲು ಸಚಿವಾಲಯದಿಂದ ಅಧಿಕಾರಿಗಳೊಂದಿಗೆ ಹೊರ ಬಂದ ಸಚಿವರು ಬಜೆಟ್‌ ಪ್ರತಿಯನ್ನು ಪ್ರದರ್ಶಿಸಿದರು.

- Advertisement -

ಬೆಳಗ್ಗೆ 10.15ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ವೇಳೆ ಬಜೆಟ್‌ ಗೆ ಅನುಮೋದನೆ ಪಡೆಯಲಿದ್ದಾರೆ.



Join Whatsapp