ಕೇಂದ್ರ ಸರಕಾರಕ್ಕೆ ದಂಡ ವಿಧಿಸಿದ ಸುಪ್ರೀಂಕೋರ್ಟ್‌!

Prasthutha|

ನವದೆಹಲಿ: ಅಲ್ಪಸಂಖ್ಯಾತ ಸ್ಥಾನವನ್ನು ರಾಜ್ಯಮಟ್ಟದಲ್ಲಿ ನಿರ್ಧಾರವಾಗಬೇಕು, ರಾಷ್ಟ್ರಮಟ್ಟದಲ್ಲಿ ಅಲ್ಲ ಎಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಯಾವುದೇ ನಿಲುವು ಪ್ರಕಟಿಸದ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯವು ದಂಡ ವಿಧಿಸಿದೆ.

- Advertisement -

ಈಗಾಗಲೇ ಅಫಿದಾವಿತ್ ಕರಡು ಸಿದ್ಧವಾಗಿದ್ದು, ಕೊರೊನಾ ಕಾರಣ ನ್ಯಾಯಾಲಯಕ್ಕೆ ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ತಿಳಿಸಿದ್ದನ್ನು ಒಪ್ಪಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದೆ. “ನಮಗೆ ಒಪ್ಪಿಕೊಳ್ಳಲು ಕಷ್ಟವಾಗುವಂಥ ನೆಪಗಳನ್ನು ಹೇಳಬೇಡಿ” ಎಂದು ನ್ಯಾಯಾಲಯ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ವಿಚಾರವಾಗಿ ಸರ್ಕಾರಕ್ಕೆ ತಮ್ಮ ಅಭಿಪ್ರಾಯ ತಿಳಿಸಲು ಅಫಿದಾವತ್ ಸಲ್ಲಿಸಲು 4 ವಾರಗಳ ಅಂತಿಮ ಗಡುವು ನೀಡಿದೆ. ಬಿಜೆಪಿ ಸದಸ್ಯೆ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ ಅರ್ಜಿಯನ್ನೇ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು. ಸಂಸ್ಥೆಗಳನ್ನು ನಡೆಸಲು ಸಾಧ್ಯವಾಗುವಂತೆ, ರಾಜ್ಯವೊಂದರಲ್ಲಿ ಇರುವ ಒಂದು ಸಮುದಾಯದ ಜನಸಂಖ್ಯಾ ಆಧಾರದ ಮೇಲೆ ಧಾರ್ಮಿಕ ಮತ್ತು ಹಿಂದುಳಿದ ಭಾಷಿಕರು ಎಂದು ಘೋಷಿಸಬೇಕು ಎಂದು ಅವರು ಅರ್ಜಿಯಲ್ಲಿ ಹೇಳಿದ್ದರು.

ರಾಷ್ಟ್ರೀಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಕಾಯ್ದೆಯ ಸೆಕ್ಷನ್ 2 (ಎಫ್) ಪ್ರಕಾರ ರಾಷ್ಟ್ರವ್ಯಾಪಿ ಜನಸಂಖ್ಯೆ ಆಧರಿಸಿ ಅಲ್ಪಸಂಖ್ಯಾತ ಸಮುದಾಯವನ್ನು ಘೋಷಿಸುವ ಅಧಿಕಾರ ಕೇಂದ್ರ ಸರಕಾರಕ್ಕೆ ಇದೆ. ರಾಷ್ಟ್ರವ್ಯಾಪಿ ಜನಸಂಖ್ಯೆ ಆಧಾರದ ಮೇರೆಗೆ ಅಲ್ಪಸಂಖ್ಯಾತರ ಸ್ಥಾನಮಾನ ನಿರ್ಧರಿಸುವುದು ಹಿಂದುಗಳು ಕಡಿಮೆ ಇರುವ ರಾಜ್ಯಗಳ ಹಿತಾಸಕ್ತಿಗೆ ಮಾರಕವಾಗಲಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.



Join Whatsapp