ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಸಂಸತ್‌ನಲ್ಲಿ ಮಾಡಿದ ಭಾಷಣವು ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ.
‘ಪೆಗಾಸಸ್ ಕೇವಲ ನ್ಯಾಯಾಂಗಕ್ಕೆ ಸಂಬಂಧಿಸಿದ ವಿಷಯವಲ್ಲ. ಅದು ರಾಷ್ಟ್ರೀಯ ಸಮಸ್ಯೆಯಾಗಿದೆ. ಅದರ ಕುರಿತು ಸದನದೊಳಗೆ ಚರ್ಚಿಸುವುದು ನಮ್ಮ ಹಕ್ಕು ಎಂಬುದನ್ನು ಬಿಜೆಪಿಯವರು ಅರಿಯಬೇಕು. ಭಾರತವು ರಾಜ್ಯಗಳ ಒಕ್ಕೂಟವಾಗಿದೆ. ವ್ಯಕ್ತಿಯೊಬ್ಬ ರಾಜಾಡಳಿತ ನಡೆಸಲು ಸಾಧ್ಯವಿಲ್ಲ’ ಎಂದು ವಾಗ್ದಾಳಿ ನಡೆಸಿದರು.
‘ರಾಜ್ಯಗಳ ಒಕ್ಕೂಟದಲ್ಲಿ, ಮಾತುಕತೆ ಮತ್ತು ಸಮಾಲೋಚನೆಯ ಮೂಲಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಬಿಜೆಪಿಯ ದೋಷಪೂರಿತ ದೃಷ್ಟಿಕೋನವು ನಮ್ಮ ದೇಶವನ್ನು ದುರ್ಬಲಗೊಳಿಸಿದೆ’ ಎಂದು ರಾಹುಲ್ ಹರಿಹಾಯ್ದಿದ್ದಾರೆ.