ಹಿಜಾಬ್, ಕೇಸರಿ ಶಾಲು ವಿವಾದ: ಗೊಂದಲಕ್ಕೆ ಆಸ್ಪದ ನೀಡದೆ ಯಥಾಸ್ಥಿತಿ ಕಾಪಾಡಿ: ಶಫಿ ಸಅದಿ

Prasthutha|

ಬೆಂಗಳೂರು: ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿ ಗೊಂದಲಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಿ ಎಂದು ರಾಜ್ಯ ಸರ್ಕಾರಕ್ಕೆ ವಕ್ಫ್​ ಬೋರ್ಡ್ ಅಧ್ಯಕ್ಷ ಶಫಿ ಸಅದಿ ಮನವಿ ಮಾಡಿದ್ದಾರೆ.

- Advertisement -

ಈ ಕುರಿತು ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, ‘ಹೈಕೋರ್ಟ್​ ತೀರ್ಪು ಬರುವವರೆಗೆ ವಸ್ತ್ರ ಸಂಹಿತೆ ಪಾಲಿಸಬೇಕು. ಹಿಜಾಬ್ ಗೊಂದಲ ಶೀಘ್ರ ಪರಿಹಾರವಾಗಬೇಕು. ಮಕ್ಕಳ ಭವಿಷ್ಯಕ್ಕೆ ಇದರಿಂದ ತೊಡಕಾಗಬಾರದು. ಹೈಕೋರ್ಟ್ ಅಂತಿಮ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಬೇಕು ಎಂದು ಹೇಳಿದರು.



Join Whatsapp