ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ಇಬ್ರಾಹಿಂ ಸುತಾರ ಅಂತ್ಯಕ್ರಿಯೆ

Prasthutha|

- Advertisement -

ಬಾಗಲಕೋಟೆ : ಪ್ರವಚನಕಾರ ಇಬ್ರಾಹಿಂ ಸುತಾರ ಅವರ ಅಂತ್ಯಕ್ರಿಯೆ ಮಹಾಲಿಂಗಪುರದ ಅವರ ತೋಟದಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ.

ಸುತಾರ ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ ಮಹಾಲಿಂಗಪುರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ. ಮೃತರ ಗೌರವಾರ್ಥವಾಗಿ ಪಟ್ಟಣದ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

- Advertisement -

ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸುವಂತೆ ಜಲಸಂಪನ್ಮೂಲ ಇಲಾಖೆ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.



Join Whatsapp