ಸಕಲ ಸರಕಾರಿ ಗೌರವಗಳೊಂದಿಗೆ ಶಿವಾಜಿ ಪಾರ್ಕ್ ನಲ್ಲಿ ಇಂದು ಸಂಜೆ ಲತಾ ಅಂತ್ಯ ಸಂಸ್ಕಾರ

Prasthutha|

ಮುಂಬೈ: ಇಂದು ಬೆಳಿಗ್ಗೆ ನಿಧನರಾದ ಲತಾ ಮಂಗೇಶ್ಕರ್ ಅವರ ಗೌರವಾರ್ಥ ರಾಷ್ಟ್ರದಾದ್ಯಂತ ಎರಡು ದಿನ ಶೋಕಾಚರಣೆ ನಡೆಸಲು ಸರ್ಕಾರ ನಿರ್ಧರಿಸಿದೆ.

- Advertisement -

ಎರಡು ದಿನ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ ಎಂದು ಸರ್ಕಾರದ ಮೂಲಗಳಿಂದ ತಿಳಿದು ಬಂದಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.

ಇಂದು ಸಂಜೆ 6:30ಕ್ಕೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಲಿದೆ.

- Advertisement -

ಕೋವಿಡ್–19 ದೃಢಪಟ್ಟ ಕಾರಣ ಜನವರಿ 8ರಂದು ಲತಾ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಇಂದು(ಭಾನುವಾರ) ಬೆಳಿಗ್ಗೆ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ.



Join Whatsapp