ದಾವಣಗೆರೆ: ಕೇಸರಿ ಶಾಲಿನ ಕಿರಿಕ್ ಇದೀಗ ದಾವಣಗೆರೆ ಜಿಲ್ಲೆಗೂ ಹಬ್ಬಿದ್ದು, ಹೊನ್ನಾಳಿ ತಾಲೂಕಿನ ಸರ್ಕಾರಿ ಪದವಿ ಕಾಲೇಜ್ಗೆ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಆಗಮಿಸಿದ್ದರಿಂದ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳ ನಡುವೆ ಕೆಲ ಕಾಲ ವಾಗ್ದಾದ ನಡೆಯಿತು.
50 ವಿದ್ಯಾರ್ಥಿಗಳು ತರಗತಿಗೆ ಹಿಜಾಬ್ ಧರಿಸಿಕೊಂಡು ಬರುವುದನ್ನು ನಿಷೇಧಿಸುವಂತೆ ಮನವಿ ಮಾಡಿ ಸಹಿ ಹಾಕಿದ್ದಾರೆ.
ಹಿಜಾಬ್ ಧರಿಸಿ ತರಗತಿಗಳಿಗೆ ಬರುವಂತಿಲ್ಲ, ಬುರ್ಖಾ ಧರಿಸಿ ಬಂದರೆ ನಾವು ಕೇಸರಿ ಶಾಲು ಹಾಕಿಕೊಂಡು ಬರುವುದಾಗಿ ಪ್ರಾಂಶುಪಾಲರಿಗೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಹೊನ್ನಾಳಿ ಕಾಲೇಜ್ನಲ್ಲಿ ಪ್ರಾಂಶುಪಾಲರಿಗೆ ಮನವಿ ಪತ್ರ ನೀಡುವಾಗಲೂ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು ಪ್ರಾಂಶುಪಾಲರ ಜೊತೆ ವಾಗ್ದಾದ ನಡೆಸಿದ್ದಾರೆ.