ಕೊಡಗು: ನೆಮ್ಮದಿ ಕೇಂದ್ರದಲ್ಲಿ ಆಧಾರ್ ಸೇವೆ ಮತ್ತೆ ಆರಂಭಿಸುವಂತೆ ಜಿಲ್ಲಾಧಿಕಾರಿ

Prasthutha|

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯ ಕಂದಾಯ ಇಲಾಖೆಯಲ್ಲಿರುವ ನೆಮ್ಮದಿ ಕೇಂದ್ರದಲ್ಲಿ 3ತಿಂಗಳಿನಿಂದ ಆಧಾರ್ ಸೇವೆ  ಸ್ಥಗಿತವಾಗಿದ್ದು, ಸೇವೆಯನ್ನು ಮತ್ತೆ ಆಂಭಿಸುವಂತೆ ಶಿವರಾಮೇಗೌಡರ ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕಂಪ್ಯೂಟರ್ ರಿಪೇರಿಯಿಂದ ಆಧಾರ್ ಸೇವೆ ಸ್ಥಗಿತವಾಗಿದ್ದು, ಸಮಸ್ಯೆಯನ್ನು ಶೀಘ್ರವಾಗಿ ಪರಿಶೀಲಿಸಿ ಸೇವೆ ಆರಂಭಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ಹಿಂದೆ ಕಂದಾಯ ಇಲಾಖೆಯಲ್ಲಿ ಸೇವೆಯನ್ನು ಆರಂಭಿಸುವಂತೆ ಮನವಿ ಮಾಡಲಾಗಿದೆ. ಅಲ್ಲದೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಆಧಾರ್ ಸೆಕ್ಷನ್ ನಲ್ಲಿರುವ ಸೋಮಶೇಖರ್ ರವರನ್ನು ಭೇಟಿ ಮಾಡಿ ಆದಷ್ಟು ಬೇಗನೆ ಸರಿಪಡಿಸಬೇಕೆಂದು ಮನವಿ ಮಾಡಿದ್ದೇವೆ. ಆದರೂ ಈವರೆಗೂ ಆಧಾರ್ ಕಾರ್ಡ್ ತೆಗೆಯುವಲ್ಲಿ ಅಧಿಕಾರಿಗಳು ಮನಸ್ಸು ಮಾಡುತ್ತಿಲ್ಲ. ಇದರ ಬಗ್ಗೆ ಜಿಲ್ಲಾಧಿಕಾರಿಯವರು  ಬೇಗನೆ ಕ್ರಮ ಕೈಗೊಂಡು ಆಧಾರ್ ಕಾರ್ಡ್ ತೆಗೆಯುವಂತೆ  ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿಕೊಂಡರು.

ಪ್ರವೇಟ್ ಕೇಂದ್ರಗಳಲ್ಲ್ಲಿ ಆಧಾರ್ ಕಾರ್ಡ್ ಮಾಡಿಸಿದರೆ ಬಡವರ ಸುಲಿಗೆ ಆಗುತ್ತಿರುವ ಬಗ್ಗೆ ಈ ಹಿಂದೆ ಕರವೇ ಕಾರ್ಯಕರ್ತರು ಅಧಿಕಾರಿಗಳಿಗೆ ತಿಳಿಸಿದ್ದೇವೆ. ಆದರೂ  ಈವರೆಗೂ ಆಧಾರ್ ಕಾರ್ಡ್  ಸೆಂಟರ್ ಪ್ರಾರಂಭ ಮಾಡದಿರುವುದಕ್ಕೆ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸದರು.



Join Whatsapp