ಶಿವಮೊಗ್ಗ: ಇಲ್ಲಿನ GFGC ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಶಾಲಾ ಧ್ವಜ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿ ದೇಶದ್ರೋಹದ ಕೃತ್ಯ ವ್ಯಸೆಗಿದ್ದಾರೆ.
ಕಾಲೇಜು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಅವಕಾಶ ನೀಡುವುದಾದರೆ ಕೇಸರಿ ಶಾಲು ಧರಿಸಿಕೊಂಡು ಬರಲು ಅವಕಾಶ ನೀಡಬೇಕು ಒತ್ತಾಯಿಸಿದ ವಿದ್ಯಾರ್ಥಿಗಳು ಬಳಿಕ ಸರ್ಕಾರಿ ಕಾರ್ಯಕ್ರಮದ ವೇಳೆ ತ್ರಿವರ್ಣ ಧ್ವಜ ಹಾರಿಸುವ ಶಾಲಾ ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿ ದೇಶದ್ರೋಹದ ಕೃತ್ಯ ವ್ಯಸೆಗಿ ಧ್ವಜಕ್ಕೆ ಅಗೌರವ ತೋರಿದ್ದಾರೆ.
ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿದ್ದು, ಕೆಲವು ಸಮಯ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರು ಗುಂಪು ಚದುರಿಸಿದ ನಂತರ ಕಾಲೇಜು ಸಿಬ್ಬಂದಿ ಧ್ವಜ ತೆರವುಗೊಳಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಜಿಲ್ಲೆಯ ಇನ್ನಷ್ಟು ಕಾಲೇಜುಗಳಿಗೆ ಮಂಗಳವಾರವೂ ಕೇಸರಿ ಶಾಲಿನ ಕಿರಿಕ್ ಹಬ್ಬಿದ್ದು, ಸಹ್ಯಾದ್ರಿ ಕಾಲೇಜು, ಬಾಪೂಜಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿಕಾರಿಪುರ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಅತಿರೇಕದ ವರ್ತನೆ ತೋರಿದರು.