ಹಿಜಾಬ್ ವಿಚಾರದಲ್ಲಿ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ: ಪ್ರಿಯಾಂಕಾ ಗಾಂಧಿ

Prasthutha|

ನವದೆಹಲಿ: ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಮುಸ್ಲಿಮ್ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸುವಂತೆ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ಅವರು ಸರ್ಕಾರ ಆಗ್ರಹಿಸಿದ್ದಾರೆ.

- Advertisement -

ಸದ್ಯ ಕರ್ನಾಟಕದಲ್ಲಿ ತಲೆದೋರಿರುವ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, ಆಕೆಯ ವಸ್ತ್ರವು ಬಿಕಿನಿ ಆಗಿರಲಿ, ಘೂಂಘಾಟ್ ಆಗಿರಲಿ ಜೀನ್ಸ್ ಅಥವಾ ಹಿಜಾಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವ ಹಕ್ಕು ಮಹಿಳೆಗೆ ಇದೆ. ಈ ಹಕ್ಕನ್ನು ಸಂವಿಧಾನ ಖಾತರಿಪಡಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಟ್ವಿಟ್ಟರ್ ನ ‘ಲಡ್ಕಿ ಹೂ ಲಡ್ ಸಕ್ತಾ ಹೂ’ ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ತಿಳಿಸಿದ್ದಾರೆ.

ಈ ಮಧ್ಯೆ ಕರ್ನಾಟಕದಲ್ಲಿ ಹಿಜಾಬ್ – ಕೇಸರಿ ಶಾಲು ಸಂಘರ್ಷ ತಾರತಕ್ಕೇರಿದ್ದು, ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಇಂದು ತೀರ್ಪು ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.



Join Whatsapp