ಲಖನೌ: ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ಜನರಿಗೆ ಬೈಕ್ನಲ್ಲಿ ಮೂವರನ್ನು ಕೂರಿಸಿಕೊಂಡು ಹೋಗಲು ಅವಕಾಶ ನೀಡುತ್ತೇವೆ ಎಂದು ಸಮಾಜವಾದಿ ಪಕ್ಷದ ಮಿತ್ರಪಕ್ಷ ಸುಹೇಲ್ದೇವ್ ಭಾರತೀಯ ಸಮಾಜ್ ಪಾರ್ಟಿ (ಎಸ್ಬಿಎಸ್ಪಿ) ಹೇಳಿದೆ.
ಈ ಕುರಿತು ಹೇಳಿಕೆ ನೀಡಿರುವ ಎಸ್ಬಿಎಸ್ಪಿ ಪಕ್ಷದ ಮುಖ್ಯಸ್ಥ ಓಂ ಪ್ರಕಾಶ್ ರಾಜ್ಭರ್, ಉತ್ತರ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ, ಜನರಿಗೆ ಬೈಕ್ನಲ್ಲಿ ಮೂವರು ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೆ, ಆಟೊರಿಕ್ಷಾ ಮತ್ತು ಟೆಂಪೊದಲ್ಲಿ ಕೂಡ ನಿಗದಿತ ಮಿತಿಗಿಂತ ಹೆಚ್ಚಿನ ಜನರು ಸಂಚರಿಸಬಹುದು, ಅದಕ್ಕೆ ದಂಡ ವಿಧಿಸುವುದಿಲ್ಲ ಎಂದು ರಾಜ್ಭರ್ ಹೇಳಿದ್ದಾರೆ.
ಉತ್ತರ ಪ್ರದೇಶದ ಮಾಜಿ ಸಚಿವರಾಗಿರುವ ರಾಜ್ಭರ್ ಈ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಜತೆ ಮೈತ್ರಿ ಮಾಡಿಕೊಂಡಿದ್ದಾರೆ.