ಕ್ಯಾನ್ಸರ್ ಕಾಯಿಲೆಗೆ ಯಾರೂ ಭಯಪಡುವ ಅಗತ್ಯವಿಲ್ಲ: ಡಾ.ಬಿ.ಸಿ.ಸತೀಶ್

Prasthutha|

- Advertisement -

ಮಡಿಕೇರಿ: ಜೀವನಶೈಲಿ, ಕೃತಕ ಬಣ್ಣ, ಕರಿದ ಪದಾರ್ಥಗಳ ಸೇವನೆ, ಪ್ಯಾಕೇಜ್ ಐಟಂಗಳ ಸೇವನೆ, ತೆಳು ಪ್ಲಾಸ್ಟಿಕ್ ಸಾಮಾಗ್ರಿಗಳಲ್ಲಿ ಬಿಸಿ ಪದಾರ್ಥಗಳ ಸೇವನೆ ಹಾಗೂ ತಂಬಾಕು ಸೇವನೆ ಮಾಡುವುದರಿಂದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು  ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಹೇಳಿದರು.

ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆಯೋಜಿಸಿದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮವಾದ ಹಣ್ಣು, ತರಕಾರಿ, ಪೌಷ್ಠಿಕ ಆಹಾರ ಉಪಯೋಗಿಸಬೇಕು. ಸಾಧ್ಯವಾದಷ್ಟು ಮನೆಯಲ್ಲಿಯೇ ತಯಾರಿಸಿದ ಆಹಾರ ಸೇವಿಸಬೇಕು. ಇದರಿಂದ ಕ್ಯಾನ್ಸರ್ ಬರದಂತೆ ಎಚ್ಚರವಹಿಸಬಹುದು. ಕ್ಯಾನ್ಸರ್ ಕಾಯಿಲೆಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

- Advertisement -

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವತಿಯಿಂದ ವಿಶ್ವ ಕ್ಯಾನ್ಸರ್ ಜಾಗೃತಿ ದಿನ ಹಾಗೂ ಸಪ್ತಾಹ ಕಾರ್ಯಕ್ರಮದ ಪ್ರಯುಕ್ತ ಜಿ.ಪಂ. ಸಿಇಒ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತ್ತು.

 ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಮಾತನಾಡಿ ಕ್ಯಾನ್ಸರ್ ರೋಗದ ಬಗ್ಗೆ ಎಲ್ಲರಿಗೂ ಅರಿವು ಇರಬೇಕು. ಉತ್ತಮ ಜೀವನಶೈಲಿಯನ್ನು ಮೈಗೂಡಿಸಿಕೊಳ್ಳಬೇಕು. ಉತ್ತಮ ಆಹಾರ, ಹಣ್ಣು ತರಕಾರಿ ಸೇವನೆ ಮಾಡಬೇಕು. ತಂಬಾಕು ಸೇವನೆ ಮಾಡಬಾರದು. ಪ್ರಾರಂಭದಲ್ಲಿಯೇ ರೋಗಲಕ್ಷಣಗಳ ಬಗ್ಗೆ ಪರೀಕ್ಷಿಸಿಕೊಂಡು ಕ್ಯಾನ್ರ‍್ನಿಂದ ಆಗುವ ತೊಂದರೆ ಹಾಗೂ ಸಾವುಗಳನ್ನು ತಡೆಗಟ್ಟಲು ಪ್ರಯತ್ನಿಸಬೇಕು ಹಾಗೂ ಸರ್ಕಾರದ ಎಬಿಎರ‍್ಕೆ ಹಾಗೂ ಇತರೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.



Join Whatsapp