ಉಡುಪಿ: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿ ನಾಳೆಯಿಂದ ಪ್ರೌಢಶಾಲೆ ಆರಂಭವಾಗಲಿದ್ದು, ಉಡುಪಿ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಫೆಬ್ರವರಿ 12ರಿಂದ 19ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ. ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ. ಪ್ರತಿಭಟನೆ, ಮೆರವಣಿಗೆಗೆ ಅವಕಾಶ ಇಲ್ಲ. ಯಾವುದೇ ವ್ಯಕ್ತಿ ಜಾತಿ ಧರ್ಮಕ್ಕೆ ನೈತಿಕತೆ ವಿರುದ್ಧ ನಡೆದುಕೊಳ್ಳುವಂತಿಲ್ಲ ಎಂದು ಆದೇಶಿಸಲಾಗಿದೆ.