‘ಗಣರಾಜ್ಯ ರಕ್ಷಿಸಿ’ ಘೋಷಣೆಯಡಿ ಫೆ.17ರಂದು ಪಾಪ್ಯುಲರ್ ಫ್ರಂಟ್ ಸಂಸ್ಥಾಪನಾ ದಿನಾಚರಣೆ

Prasthutha|

ಯುನಿಟಿ ಮಾರ್ಚ್, ಸಾರ್ವಜನಿಕ ಸಮಾರಂಭ ರದ್ದು

- Advertisement -

ಬೆಂಗಳೂರು: ಪ್ರಜಾಪ್ರಭುತ್ವಕ್ಕೆ ಉಂಟಾಗಿರುವ ಅಪಾಯಗಳು ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಫೆ.17ರ ತನ್ನ ಸಂಸ್ಥಾಪನಾ ದಿನಾಚರಣೆಯನ್ನು ‘ಗಣರಾಜ್ಯ ರಕ್ಷಿಸಿ’ ಎಂಬ ಘೋಷವಾಕ್ಯದಡಿಯಲ್ಲಿ ಆಚರಿಸಲಿದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಹೇಳಿದ್ದಾರೆ.

ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣಾ ಕಾರ್ಯಕ್ರಮ, ಯುನಿಟಿ ಮಾರ್ಚ್(Rally) ಮತ್ತು ಸಾರ್ವಜನಿಕ ಸಭೆ, ಸಮಾಜ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಾ ಬರಲಾಗುತ್ತಿತ್ತು. ಆದರೆ ಪ್ರಸಕ್ತ ಕೋವಿಡ್ ವಿಷಮ ಸನ್ನಿವೇಶವನ್ನು ಗಮನದಲ್ಲಿರಿಸಿಕೊಂಡು ಈ ಬಾರಿ ಯುನಿಟ್ ಮಾರ್ಚ್(Rally) ಮತ್ತು ಸಾರ್ವಜನಿಕ ಸಮಾವೇಶಗಳನ್ನು ರದ್ದುಪಡಿಸಲಾಗಿದ್ದು, ಉಳಿದಂತೆ ಎಲ್ಲಾ ಕಾರ್ಯಕ್ರಮಗಳು ಎಂದಿನಂತೆಯೇ ನಡೆಯಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

- Advertisement -

ತುಳಿತಕ್ಕೊಳಗಾದ, ಶೋಷಿತ ಸಮುದಾಯಗಳ ವಿಶೇಷವಾಗಿ ಮುಸ್ಲಿಮರ ಸಬಲೀಕರಣದ ಗುರಿಯೊಂದಿಗೆ ದಕ್ಷಿಣ ಭಾರತದಲ್ಲಿ ಕಾರ್ಯಾಚರಿಸುತ್ತಿದ್ದ ಸಮಾನ ಮನಸ್ಕ ಸಂಘಟನೆಗಳನ್ನು ಜೊತೆಗೂಡಿಸಿ, 2007ರ ಫೆಬ್ರವರಿ 17ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ನಡೆದ ಮಹಾ ಸಮಾವೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಎಂಬ ರಾಷ್ಟ್ರೀಯ ಆಂದೋಲನವನ್ನು ಹುಟ್ಟುಹಾಕಲಾಗಿತ್ತು. ಇದರ ಅಂಗವಾಗಿ ವರ್ಷಂಪ್ರತಿ ಫೆ.17ರಂದು ಪಾಪ್ಯುಲರ್ ಫ್ರಂಟ್ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ನಾಸಿರ್ ಪಾಶ ಹೇಳಿದ್ದಾರೆ.



Join Whatsapp