ಹಾಸನದಿಂದ ಶಬರಿಮಲೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್’ಗೆ ಟಿಪ್ಪರ್ ಲಾರಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ

Prasthutha|

ಕೋಝಿಕ್ಕೋಡ್: ಹಾಸನದಿಂದ ಶಬರಿಮಲೆಗೆ ಹೊರಟಿದ್ದ 14 ಯಾತ್ರಾರ್ಥಿಗಳಿದ್ದ ಟೆಂಪೋ ಟ್ರಾವೆಲರ್ ವಾಹನ, ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿದ್ದು, ಇಬ್ಬರು ಕನ್ನಡಿಗರು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಕೋಝಿಕ್ಕೋಡ್ ಜಿಲ್ಲೆಯ ಪೂಲಾಡಿಕುನ್ನು ಎಂಬಲ್ಲಿ ಮುಂಜಾನೆ 5 ಗಂಟೆಗೆ ಅಪಘಾತದ ಸಂಭವಿಸಿದೆ. ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ಟ್ರಕ್’ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಹಾಸನದವರಾದ ನಾಗರಾಜ್, ಶಿವಣ್ಣ ಹಾಗೂ ಎರ್ನಾಕುಲಂ ನಿವಾಸಿ ದಿನೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 11 ಮಂದಿ ಗಾಯಾಳುಗಳನ್ನು ಕೋಝಿಕ್ಕೋಡ್ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದ್ದು, ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.
ಟೆಂಪೋ ಟ್ರಾವೆಲರ್ ಚಾಲಕ ನಿದ್ದೆಗೆ ಜಾರಿದ ಕಾರಣ ಅಪಘಾತ ಸಂಭವಿಸಿರುವುದಾಗಿ ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಟಿಪ್ಪರ್’ನಲ್ಲಿದ್ದ ಇಬ್ಬರು ಚಾಲಕರಿಗೂ ಅಪಘಾತದಲ್ಲಿ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



Join Whatsapp