ರಾಜ್ಯಾದ್ಯಂತ ಎಲ್ಲಾ ಪಿಯು, ಡಿಗ್ರಿ ಕಾಲೇಜು ಪುನರಾರಂಭ

Prasthutha|

ಬೆಂಗಳೂರು: ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಬುಧವಾರದಿಂದ ಪಿಯು ಹಾಗೂ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಕಾಲೇಜುಗಳಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ. 

- Advertisement -

ವಿವಿಗಳು, ಕಾಲೇಜುಗಳಿಗೆ ಫೆ.16ರವರೆಗೆ ವಿಸ್ತರಿಸಿದ್ದ ರಜೆಯನ್ನು ರದ್ದುಪಡಿಸಿದ್ದ ಉನ್ನತ ಶಿಕ್ಷಣ ಇಲಾಖೆಯು ಫೆ.16ರಿಂದಲೇ ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳ ವ್ಯಾಪ್ತಿಗೆ ಬರುವ ಎಲ್ಲಾ ಸರ್ಕಾರಿ, ಅನುದಾನಿಕ ಮತ್ತು ಅನುದಾನ ರಹಿತ ಪದವಿ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಭೌತಿಕ ತರಗತಿ ಆರಂಭಿಸುವಂತೆ ಮಂಗಳವಾರ ಸುತ್ತೋಲೆ ಹೊರಡಿಸಿತ್ತು. ಇದರಂತೆ ಇಂದಿನಿಂದ ಪಿಯು ಹಾಗೂ ಪದವಿ ಕಾಲೇಜುಗಳು ಆರಂಭಗೊಂಡಿವೆ. 

ನಿನ್ನೆಯಷ್ಟೇ ಮಧ್ಯಂತರ ಆದೇಶ ಹೊರಡಿಸಿದ್ದ ಹೈಕೋರ್ಟ್’ನ ತ್ರಿಸದಸ್ಯ ಪೀಠ, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಸಂಕೇತ ಬಳಸದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

- Advertisement -

ಇನ್ನು ಕೆಲವು ಕಾಲೇಜಿನಲ್ಲಿ ಹಿಜಾಬ್ ಹಾಕಿದಕ್ಕೆ ತರಗತಿಯಿಂದ ಹೊರಹಾಕಿದ ಘಟನೆ ಕೂಡ ನಡೆದಿದೆ.

Join Whatsapp