ಪಾಪ್ಯುಲರ್ ಫ್ರಂಟ್ 15ನೇ ಸಂಸ್ಥಾಪನಾ ದಿನಾಚರಣೆ: ದ.ಕ.ಜಿಲ್ಲಾ ಕಚೇರಿಯಲ್ಲಿ ಧ್ವಜಾರೋಹಣ

Prasthutha|

ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ 15ನೇ ಸಂಸ್ಥಾಪನಾ ದಿನದ ಅಂಗವಾಗಿ ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯ ಮುಂಭಾಗ ಧ್ವಜಾರೋಹಣ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

- Advertisement -

ಪಾಪ್ಯುಲರ್ ಫ್ರಂಟ್ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್ ಧ್ವಜಾರೋಹಣ ನೆರವೇರಿಸಿ, ದೇಶದ 8 ರಾಜ್ಯಗಳಲ್ಲಿ   ಸಮುದಾಯದ ಸಬಲೀಕರಣ, ಶೋಷಿತ ವರ್ಗದ ಅಭಿವೃದ್ಧಿಗಾಗಿ ಮತ್ತು ಫ್ಯಾಶಿಸ್ಟ್ ವಿರುದ್ಧ ರಾಜಿರಹಿತವಾಗಿ ಹೋರಾಡುತ್ತಿದ್ದ ವಿವಿಧ ಸಂಘಟನೆಗಳನ್ನು 2007, ಫೆ.17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಲೀನಗೊಳಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಎಂಬ ಸಂಘಟನೆಯನ್ನು ರೂಪೀಕರಿಸಲಾಯಿತು. ಇಂದು ದೇಶದ ಮೂಲೆ ಮೂಲೆಗಳಲ್ಲಿ ಸಂಘಟನೆ ಶೋಷಿತ ವರ್ಗದ ಸಬಲೀಕರಣಕ್ಕಾಗಿ ಕಾರ್ಯಾಚರಿಸುತ್ತಿದೆ ಎಂದು ಹೇಳಿದರು.

ಪಾಪ್ಯುಲರ್ ಫ್ರಂಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್, ರಾಷ್ಟ್ರಮಟ್ಟದ ಸಂಘಟನೆಯಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಶೋಷಿತರ, ಮರ್ದಿತರ ದನಿಯಾಗಿದೆ. ಫೆ.17 ಹೋರಾಟಗಾರರಿಗೆ ಅಭಿಮಾನದ ದಿನವಾಗಿದೆ. ಫ್ಯಾಶಿಸ್ಟ್ ಶಕ್ತಿಗಳು ದೇಶದ ನೈಜ ಆದರ್ಶವಾಗಿರುವ ಪ್ರಜಾಪ್ರಭುತ್ವವನ್ನು ಸಂವಿಧಾನವನ್ನು ಬುಡಮೇಲು ಮಾಡುವ ಈ ಸಂದರ್ಭದಲ್ಲಿ ಅದರ ವಿರುದ್ಧ ಪಾಪ್ಯುಲರ್ ಫ್ರಂಟ್ ಸೆಟೆದು ನಿಂತು ಹೋರಾಟ ನಡೆಸುತ್ತಿದೆ ಎಂದರು.

- Advertisement -

ಗಣರಾಜ್ಯವನ್ನು ರಕ್ಷಿಸಿ ಎಂಬುದು ಈ ವರ್ಷದ ಘೋಷವಾಕ್ಯವಾಗಿದೆ. ಈ ದೇಶದ ಒಕ್ಕೂಟ ವ್ಯವಸ್ಥೆ ಅಪಾಯದಲ್ಲಿದ್ದು, ಇದರ ರಕ್ಷಣೆ ಪ್ರತಿಯೊಬ್ಬರ ಭಾರತೀಯನ ಕರ್ತವ್ಯವಾಗಿದೆ. ಈ ಹೋರಾಟದಲ್ಲಿ ಪಾಪ್ಯುಲರ್ ಫ್ರಂಟ್ ಯಾವತ್ತೂ ಮುಂಚೂಣಿಯಲ್ಲಿರಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಅಬ್ದುಲ್ ಖಾದರ್ ಕುಳಾಯಿ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.



Join Whatsapp