ಮಾಜಿ ಶಾಸಕ ಜಿ.ವಿ.ಮಂಟೂರ ನಿಧನ

Prasthutha|

ಬಾಗಲಕೋಟೆ: ಮಾಜಿ ಶಾಸಕ ಜಿ.ವಿ.ಮಂಟೂರ (92)  ಗುರುವಾರ ಬೆಳಿಗ್ಗೆ  ನಗರದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ.

- Advertisement -

ಜಿ.ವಿ.ಮಂಟೂರ 1983ರಲ್ಲಿ ಮೊದಲ ಬಾರಿಗೆ ಪಕ್ಷೇತರರಾಗಿ ಸ್ಪರ್ಧಿಸಿ ಬಾಗಲಕೋಟೆ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. 1985ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಅಂದಿನ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಸರಳತೆಗೆ ಹೆಸರಾಗಿದ್ದ ಮಂಟೂರ ಇತ್ತೀಚಿನವರೆಗೂ ಸರ್ಕಾರಿ ಬಸ್ ನಲ್ಲಿಯೇ ಓಡಾಟ ನಡೆಸುತ್ತಿದ್ದರು.

ಅಂತ್ಯಕ್ರಿಯೆ ಸ್ವಗ್ರಾಮ ಬಾಗಲಕೋಟೆ ತಾಲ್ಲೂಕಿನ ಖಜ್ಜಿಡೋಣಿಯಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.



Join Whatsapp