ದೆಹಲಿ: ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ 1000 ಕೋಟಿ ರೂ. ಅನುದಾನ ನೀಡಿದೆ.
ಪಿಯೂಷ್ ಗೋಯೆಲ್ ರೈಲು ಸಚಿವರಾಗಿದ್ದಾಗ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು.
2022-23ರ ಬಜೆಟ್ ನಲ್ಲಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಯೋಜನೆಗೆ 1000 ಕೋಟಿ ರೂ. ಅನುದಾನ ನೀಡಿದ್ದಾರೆ.
ಮೈಸೂರು-ಕುಶಾಲನಗರ ನೂತನ 87.2 ಕಿ. ಮೀ. ಮಾರ್ಗ ನಿರ್ಮಾಣಕ್ಕೆ 1,854.62 ಕೋಟಿ ರೂ. ವೆಚ್ಚವಾಗಲಿದೆ ಎಂದು 2019ರ ಫೆಬ್ರವರಿಯಲ್ಲಿ ನಡೆದ ಸಮೀಕ್ಷೆಯಲ್ಲಿ ಅಂದಾಜಿಸಲಾಗಿತ್ತು. ಪ್ರತಿ ಕಿ.ಮೀ ಮಾರ್ಗ ನಿರ್ಮಾಣಕ್ಕೆ 21.27 ಕೋಟಿ ಬೇಕು ಎಂದು ಅಂದಾಜಿಸಲಾಗಿದೆ. 274.65 ಹೆಕ್ಟೇರ್ ಒಣಭೂಮಿ ಮತ್ತು 275.15 ಹೆಕ್ಟೇರ್ ನೀರಾವರಿ ಜಮೀನು ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.