ವಿಜಯಪುರ: ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಕಾಲೇಜು ಪ್ರವೇಶ ನಿರಾಕರಿಸಿದ ಘಟನೆ ಇಂಡಿ ಪಟ್ಟಣದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ನಡೆದಿದೆ.
ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು, ಹಿಂದೂ ವಿದ್ಯಾರ್ಥಿನಿಯರು ಕುಂಕುಮ ಹಚ್ಚಿಕೊಂಡು ಬರುತ್ತಾರಲ್ಲಾ ಎಂದು ಪ್ರಶ್ನಿಸಿದ್ದಳು. ಇಂದು ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಶಾಲಾ ಪ್ರವೇಶ ನಿರಾಕರಣೆ ಮಾಡಲಾಗಿದ್ದು, ಪರಿಣಾಮ ಉಪನ್ಯಾಸಕ ಹಾಗೂ ವಿದ್ಯಾರ್ಥಿ ಮಧ್ಯೆ ಕೆಲಕಾಲ ವಾಗ್ವಾದ ನಡೆದಿದೆ ಎಂದು ಹೇಳಲಾಗಿದೆ.
ಹಿಜಾಬ್ ಹಾಗೂ ಕೇಸರಿ ಶಾಲು ಹೊರತುಪಡಿಸಿ ಹಣೆಗೆ ಕುಂಕುಮ, ನಾಮ ಹಾಕಲು ಯಾಕೆ ಅನುಮತಿಯಿಲ್ಲ ಎಂದು ವಿದ್ಯಾರ್ಥಿ ಪ್ರಶ್ನೆ ಮಾಡಿದ್ದಾನೆ.