ಕಾಸರಗೋಡು: ಬಿಜೆಪಿ ಜಿಲ್ಲಾ ಸಮಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದ ಕಾರ್ಯಕರ್ತರು!

Prasthutha|

- Advertisement -

ಕಾಸರಗೋಡು: ಜಿಲ್ಲಾ ಸಮಿತಿ ಕಚೇರಿಗೆ ಬೀಗ ಜಡಿದ ಬಿಜೆಪಿ ಕಾರ್ಯಕರ್ತರು ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಸೇರಿದಂತೆ ಮುಖಂಡರ ವಿರುದ್ಧ ಘೋಷಣೆ ಕೂಗಿದ ಘಟನೆ ನಡೆದಿದೆ.

ಕುಂಬಳೆ ಪಂಚಾಯತ್ ನಲ್ಲಿ ಸಿಪಿಎಂ ಜೊತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ಬಿಜೆಪಿಯ ಜಿಲ್ಲಾ ಸಮಿತಿ ಕಚೇರಿಯ ಎದುರು ಜಮಾಯಿಸಿದ ಕಾರ್ಯಕರ್ತರು ಕಚೇರಿಗೆ ಬೀಗ ಜಡಿದು ಪ್ರತಿಭಟನೆಗೆ ಇಳಿದಿದ್ದು, ಸಮಸ್ಯೆ ಬಗೆಹರಿಸದೆ ಕಚೇರಿ ತೆರೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

- Advertisement -

ಕುಂಬಳೆ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಪಕ್ಷದ ಹಿರಿಯ ಮುಖಂಡರಾದ ಸುರೇಶ್ ಕುಮಾರ್ ಶೆಟ್ಟಿ, ಶ್ರೀಕಾಂತ್ ಮತ್ತು ಮಣಿಕಂಠ ರೈ ಸಿಪಿಎಂ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಪಕ್ಷದ ನಾಯಕತ್ವ ಅವರ ವಿರುದ್ಧ ಕ್ರಮ ಕೈಗೊಳ್ಳದೆ ಉನ್ನತ ಸ್ಥಾನಗಳನ್ನು ನೀಡಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.



Join Whatsapp