ಹೈದರಾಬಾದ್: ಆಂಧ್ರಪ್ರದೇಶದ ಐಟಿ ಇಲಾಖೆ ಸಚಿವ ಮೇಕಪತಿ ಗೌತಮ್ ರೆಡ್ಡಿ ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.
49ವರ್ಷದ ಗೌತಮ್ ರೆಡ್ಡಿ ಅವರಿಗೆ ಇಂದು ಬೆಳಗ್ಗೆ ಹಠಾತ್ ಹೃದಯಾಘಾತ ಕಾಣಿಸಿಕೊಂಡಿದ್ದು, ಅವರನ್ನು ಜೂಬ್ಲಿ ಹಿಲ್ಸ್ನ ಅಪೋಲೋ ಆಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯೆಯೇ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.
ಆಂಧ್ರಪ್ರದೇಶ ಸರ್ಕಾರದ ಐಟಿ ಖಾತೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಗೌತಮ್ ರೆಡ್ಡಿ, ಒಂದು ವಾರದ ಹಿಂದಷ್ಟೇ ದುಬೈ ಎಕ್ಸ್ಪೋದಲ್ಲಿ ಪಾಲ್ಗೊಂಡು ವಿವಿಧ ಕಂಪನಿಗಳ ಜೊತೆ ಆಂಧ್ರಪ್ರದೇಶದಲ್ಲಿ ಹೂಡಿಕೆ ಮಾಡುವ ಒಪ್ಪಂದದಲ್ಲಿ ಭಾಗವಹಿಸಿದ್ದರು.
ನಿನ್ನೆಯಷ್ಟೇ ಅವರು ದುಬೈಯಿಂದ ಹೈದರಾಬಾದ್ಗೆ ಬಂದಿಳಿದಿದ್ದರು. ಮಾಜಿ ಸಂಸದ ಮೇಕಪತಿ ರಾಜಮೋಹನ್ ರೆಡ್ಡಿ ಅವರ ಪುತ್ರರಾದ ಗೌತಮ್ರೆಡ್ಡಿ ನೆಲ್ಲೂರು ಜಿಲ್ಲೆಯ ಆತ್ಮಾಕೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಅವರು 2014, 2019 ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.