ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೂವರು ಆರೋಪಿಗಳನ್ನು ನಿನ್ನೆಯೇ ಬಂಧಿಸಲಾಗಿತ್ತು. ಹಾಗಾಗಿ, ಪ್ರಕರಣದಲ್ಲಿ ಈವರೆಗೆ 5 ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಶಿವಮೊಗ್ಗ ನಗರದ ಭಾರತಿ ಕಾಲೋನಿ ಬಳಿ ರವಿವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹರ್ಷನನ್ನು ಕೊಲೆ ಮಾಡಿದ್ದರು. ಕೊಲೆ ಪ್ರಕರಣದಲ್ಲಿ 7 ಮಂದಿಯ ಕೈವಾಡವಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.