ರೇಡಿಯೋ ಆರ್.ಜೆ ರಚನಾ ಹೃದಯಾಘಾತದಿಂದ ನಿಧನ

Prasthutha|

ಬೆಂಗಳೂರು: ರೇಡಿಯೋ ಮಿರ್ಚಿ ಮೂಲಕ ತಮ್ಮ ವೃತ್ತಿ ಬದುಕನ್ನು ಆರಂಭಿಸಿದ್ದ, ತಮ್ಮ ಮಾತಿನ ಮೂಲಕವೇ ಜನರ ಮನಸ್ಸು ಗೆದ್ದಿದ್ದ ಖ್ಯಾತ ಆರ್.ಜೆ ರಚನಾ (RJ Rachana) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

- Advertisement -

ರೇಡಿಯೋ ಮಿರ್ಚಿ, ರೇಡಿಯೋ ಸಿಟಿ ಸೇರಿದಂತೆ ಹಲವು ರೇಡಿಯೋ ವಾಹಿನಿಗಳಲ್ಲಿ ಕೆಲಸ ಮಾಡಿದ್ದ ಅವರು, ತಮ್ಮದೇ ವಿಶೇಷ ಶೈಲಿಯ ಮಾತಿನಿಂದ ಅಪಾರ ಕೇಳುಗರನ್ನು ಪಡೆದಿದ್ದರು. ಹಾಗಾಗಿ ರಚನಾ ಕಾರ್ಯಕ್ರಮಗಳನ್ನು ಕೇಳಲು ಕೇಳುಗರ ವರ್ಗವೇ ಸೃಷ್ಟಿಯಾಗಿತ್ತು. ಅದರಲ್ಲೂ ಸ್ಯಾಂಡಲ್ ವುಡ್ ನ ಅನೇಕ ಸ್ಟಾರ್ ನಟರು ರಚನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ತುದಿಗಾಲಲ್ಲಿ ನಿಲ್ಲುತ್ತಿದ್ದರು. ಅಲ್ಲದೇ ಸಿಂಪಲ್ಲಾಗ್​ ಒಂದ್ ಲವ್​ ಸ್ಟೋರಿ ಸಿನಿಮಾದಲ್ಲಿ ನಟಿಸಿದ್ದರು, ಹಾಗೂ ಹಲವು ಸೀರಿಯಲ್​​, ಸಿನಿಮಾಗಳಲ್ಲೂ ನಟಿಸಿದ್ದರು

ರೇಡಿಯೋ ಜಾಕಿಯಾಗಿ ಕೆಲಸ ಮಾಡುತ್ತಿದ್ದ ಆರ್ ಜೆ ರಚನಾ (39) ಕಳೆದ 7 ವರ್ಷಗಳಿಂದ ಕೆಲಸ ಬಿಟ್ಟು ಮನೆಯಲ್ಲಿಯೇ ಏಕಾಂಗಿಯಾಗಿದ್ದರು. ಇದರಿಂದಾಗಿ ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ. ಅತೀ ಚಿಕ್ಕ ವಯಸ್ಸಿನಲ್ಲೇ ಅವರು ಕಾರ್ಡಿಯಾಕ್ ಅರೆಸ್ಟ್‍ನಿಂದಾಗಿ ನಿಧನರಾಗಿದ್ದಾರೆ. 

- Advertisement -

ಡಯೆಟ್, ಸದಾ ಹಸನ್ಮುಖಿಯಾಗಿಯೇ ಇರುತ್ತಿದ್ದ ಮತ್ತು ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ತಗೆದುಕೊಳ್ಳುತ್ತಿದ್ದ ರಚನಾ ಸಾವು ಅವರ ಸ್ನೇಹಿತರ ಬಳಗಕ್ಕೆ ತೀವ್ರ ಆಘಾತ ಮೂಡಿಸಿದೆ.



Join Whatsapp