ಶಿವಮೊಗ್ಗ ಕೊಲೆ ಪ್ರಕರಣ| ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ : ಬೊಮ್ಮಾಯಿ

Prasthutha|

ಬೆಂಗಳೂರು: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಹಲವಾರು ಜನರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ತೀವ್ರವಾಗಿ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ.  ಕರ್ಫ್ಯೂ ಸಹ  ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

- Advertisement -

ಕಾಂಗ್ರೆಸ್ ಅನುಭವದ ಮಾತು

ಇದು ಸರ್ಕಾರಿ ಪ್ರಾಯೋಜಿತ ಮೆರವಣಿಗೆ, ಸೆಕ್ಷನ್ 144 ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು, ಕಾಂಗ್ರೆಸ್ ನವರು ಈ ಹಿಂದೆ ಸರ್ಕಾರಿ ಪ್ರಾಯೋಜಿತ ಕೆಲಸಗಳನ್ನು ಮಾಡಿದ್ದಾರೆ. ಅದರ ಅನುಭವದಿಂದ ಆ ಮಾತುಗಳು ಆಡಿದ್ದಾರೆ ಎಂದರು.

ದೆಹಲಿ ಪ್ರಯಾಣದ ಬಗ್ಗೆ ಪ್ರತ್ರಕರ್ತರ ಪ್ರಶ್ನೆಗೆ ಉತ್ತರಿಸಿ ‘ಸದ್ಯಕ್ಕೆ ದೆಹಲಿಗೆ ಹೋಗುವ ಉದ್ದೇಶ ಇಲ್ಲ’ ಎಂದರು.



Join Whatsapp