ಮುಂಬೈ: ಮಹಾರಾಷ್ಟ್ರದ ಸಚಿವ, ಎನ್ ಸಿಪಿ ನಾಯಕ ನವಾಬ್ ಮಲಿಕ್ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದ ಬೆನ್ನತ್ತಿರುವ ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆ ಮುಗಿದ ತಕ್ಷಣ ಇ.ಡಿ. ಅಧಿಕಾರಿಗಳು ನವಾಬ್ ಮಲ್ಲಿಕರ್ ರನ್ನು ಬಂಧಿಸಿದ್ದಾರೆ.
ದಾವೂದ್ ಇಬ್ರಾಹಿಂ ಹಲವು ರಾಜಕಾರಣಿಗಳೊಂದಿಗೆ ಆಸ್ತಿ, ಹಣಕಾಸು ವ್ಯವಹಾರ ನಡೆಸಿದ್ದಾನೆ ಎಂಬ ಶಂಕೆಯಡಿ ವಿಚಾರಣೆ ನಡೆಸುತ್ತಿದೆ.