ಬಂಟ್ವಾಳ: ಕಲ್ಲಿನ ಕೋರೆಯ ಹೊಂಡಕ್ಕೆ ಇಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ನರಿಕೊಂಬು ಗ್ರಾಮದ ಏಲಬೆ ಎಂಬಲ್ಲಿ ತಡರಾತ್ರಿ ನಡೆದಿದೆ.
ನರಿಕೊಂಬು ಗ್ರಾಮದ ನಾಯಿಲ ನಿವಾಸಿ ಬೋರುಗುಡ್ಡೆ ನಿವಾಸಿ ಜಗದೀಶ್ ಮತ್ತು ಅಲ್ಲಿಪಾದೆ ನಿವಾಸಿ ನಿದೀಶ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಇಲ್ಲಿ ಅಕ್ರಮವಾಗಿ ಕಲ್ಲಿನ ಕೋರೆಗಳು ಕಾರ್ಯಾಚರಿಸುತ್ತಿದ್ದು, ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡದೆ ಮೃತದೇಹವನ್ನು ಸಾಗಿಸಲು ಬಿಡುವುದಿಲ್ಲ ಎಂದು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.