ಉಕ್ರೇನ್ ನಲ್ಲಿ ಸಿಲುಕಿರುವ ಕೊಡಗಿನ ನಾಲ್ಕು ವಿದ್ಯಾರ್ಥಿಗಳು !

Prasthutha|

ಮಡಿಕೇರಿ: ಉಕ್ರೇನ್ ಮತ್ತು ರಷ್ಯಾ ದೇಶಗಳ ನಡುವೆ ಭೀಕರ ಯುದ್ಧ ಆರಂಭವಾಗಿದ್ದು ಕೊಡಗು ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು ಉಕ್ರೇನ್ ದೇಶದಲ್ಲಿ ಸಿಲುಕಿದ್ದಾರೆ.

- Advertisement -

ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಮೂವರು ವಿದ್ಯಾರ್ಥಿಗಳು ಹಾಗೂ ವಿರಾಜಪೇಟೆಯ ಒಬ್ಬ ವಿದ್ಯಾರ್ಥಿ ಉಕ್ರೇನ್ ದೇಶದ ಖಾರ್ಕಿವ್ ಪಟ್ಟಣದಲ್ಲಿ ಸಿಲುಕಿದ್ದಾರೆ. ಕುಶಾಲನಗರ ಸಮೀಪದ ಮುಳ್ಳುಸೋಗೆ ಗ್ರಾಮದ ಆರೋಗ್ಯ ಶುಶ್ರೂಷಕಿ ಒಬ್ಬರ ಮಗ ಲಿಖಿತ್, ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದ ಹಾಗೂ ಕಾಂಗ್ರೆಸ್ನ ಮಾಜಿ ಕೊಡಗು ಜಿಲ್ಲಾಧ್ಯಕ್ಷರೂ ಆಗಿರುವ ಕೆ.ಕೆ ಮಂಜುನಾಥ್ ಅವರ ಪುತ್ರ ಚಂದನ್ ಗೌಡ, ಕೂಡಿಗೆ ಗ್ರಾಮದ ಅಕ್ಷಿತಾ ಮತ್ತು ವಿರಾಜಪೇಟೆ ನಗರದ ಸೋನು ಸುಫಿಯಾ ಈ ನಾಲ್ವರು ವಿದ್ಯಾರ್ಥಿಗಳು ಉಕ್ರೇನ್ ದೇಶದ ಖಾರ್ಕಿವ್ ನಗರದಲ್ಲಿ ಸಿಲುಕಿದ್ದಾರೆ.

ಕೊಡಗಿನಲ್ಲಿ ಇರುವ ಪೋಷಕರು ಮಕ್ಕಳ ಪರಿಸ್ಥಿತಿ ಕಂಡು ರಾಜ್ಯಕ್ಕೆ ಕರೆ ತರಬೇಕು ಎಂದು ಮನವಿ ಮಾಡುತ್ತಿದ್ದಾರೆ. ಇನ್ನೂ ಕೊಡಗು ಜಿಲ್ಲಾಡಳಿತ ಅಥವಾ ಸರ್ಕಾರ ಇದುವರೆಗೆ ನಮ್ಮನ್ನು ಸಂಪರ್ಕಿಸಿಲ್ಲ. ಅಧಿಕಾರಿಗಳಿಗೆ ಅಥವಾ ಜನಪ್ರತಿನಿಧಿಗಳಿಗೆ ತೊಂದರೆ ಆದರೆ ಮಾತ್ರ ನೋವು ಎಂದುಕೊಂಡಿರಬಹುದು ಎಂದು ಜಿಲ್ಲಾಡಳಿತದ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದರು.



Join Whatsapp