ಉಪ್ಪಿನಂಗಡಿ: ಮನೆಯಂಗಳದಲ್ಲಿ ಇರಿಸಲಾಗಿದ್ದ ಕೆಂಪು ಕಲ್ಲಿನ ಅಟ್ಟಿ ಮಗುಚಿ ಬಿದ್ದು ಮೂರುವರೆ ವರ್ಷ ಪ್ರಾಯದ ಗಂಡು ಮಗುವೊಂದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಬಾಯ್ತಾರು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಮುಹಮ್ಮದ್ ನೌಶೀರ್ ಮೃತ ಮಗು ಎಂದು ಗುರುತಿಸಲಾಗಿದೆ.
ಕಟ್ಟಡ ನಿರ್ಮಾಣಕ್ಕೆಂದು ಮನೆಯಂಗಳದಲ್ಲಿ ತಂದಿರಿಸಲಾಗಿದ್ದ ಕೆಂಪು ಕಲ್ಲಿನ ಅಟ್ಟಿಯ ಬಳಿ ಆಟವಾಡುತ್ತಿದ್ದ ನೌಶಿರ್ ಮೇಲೆ ಕಲ್ಲಿನ ಅಟ್ಟಿ ಮಗುಚಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.