ವಿಶ್ವಸಂಸ್ಥೆ: ಉಕ್ರೇನ್ನ ಮೇಲಿನ ರಷ್ಯಾದ ಆಕ್ರಮಣವನ್ನು ಖಂಡಿಸಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಬುಧವಾರ ನಿರ್ಣಯ ಅಂಗೀಕರಿಸಲಾಗಿದ್ದು, ಏಷ್ಯಾ ರಾಷ್ಟ್ರಗಳಾದ ಭಾರತ, ಚೀನಾ, ಪಾಕಿಸ್ತಾನ ಸಭೆಯಿಂದ ದೂರ ಉಳಿದು ನಿರ್ಲಿಪ್ತತೆ ಪ್ರದರ್ಶಿಸಿವೆ.
ಒಟ್ಟು 193 ದೇಶಗಳ ಪೈಕಿ 141 ದೇಶಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದವು. ರಷ್ಯಾ, ಬೆಲರೂಸ್ ಎರಿಟ್ರಿಯಾ, ಉತ್ತರ ಕೊರಿಯಾ, ಸಿರಿಯಾ… ಈ ಐದು ದೇಶಗಳು ನಿರ್ಣಯದ ವಿರುದ್ಧ ಮತ ಹಾಕಿವೆ.
ರಷ್ಯಾ ಈ ಕೂಡಲೇ ಸೇನಾ ಕಾರ್ಯಾಚರಣೆಯನ್ನು ನಿಲ್ಲಿಸಬೇಕು, ಸಮಸ್ಯೆಯ ಶಾಂತಿಯುತ ಪರಿಹಾರಕ್ಕಾಗಿ ರಾಜತಾಂತ್ರಿಕ ಮಾರ್ಗ ಅನುಸರಿಸಬೇಕು, ನಾಗರಿಕರನ್ನು ರಕ್ಷಿಸಬೇಕು ಎಂಬ ಅಂಶಗಳು ನಾಲ್ಕು ಪುಟಗಳ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.