ಬೆಂಗಳೂರು: ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಮೊದಲ ಬಜೆಟ್ ಅನ್ನು ಮಂಡಿಸಲಿದ್ದಾರೆ. ನಾಳೆ ಮಧ್ಯಾಹ್ನ 12.30ಕ್ಕೆ ವಿಧಾನಸೌಧದಲ್ಲಿ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ.
ವಿತ್ತೀಯ ಶಿಸ್ತು ಕಾಪಾಡಿಕೊಂಡು ಸಾಲದ ಹೊರೆ ಬೀಳದೆ ಮುಂದಿನ ಚುನಾವಣೆಗೆ ಜನಪ್ರಿಯ ಬಜೆಟ್ ಘೋಷಿಸಲು ಮುಂದಾಗಿದ್ದಾರೆ. ಇದು ಚುನಾವಣಾ ವರ್ಷವಾಗಿರುವುದರಿಂದ ಭರಪೂರ ಜನಪ್ರಿಯ ಯೋಜನೆಗಳ ಘೋಷಣೆ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ.
ಎರಡು ಪೂರಕ ಅಂದಾಜು ಮಂಡಿಸಿರುವ ಬೊಮ್ಮಾಯಿಗೆ ಮೊದಲ ಪೂರ್ಣ ಬಜೆಟ್ ಮಂಡಿಸಲು ಅವಕಾಶ ಒದಗಿ ಬಂದಿದೆ. ಆದರೆ, ಹಣಕಾಸು ಇಲಾಖೆ ಮೂಲ ಗಳ ಪ್ರಕಾರ, ರಾಜ್ಯ ಸರ್ಕಾರದ ಖಜಾನೆ ಸಂಪನ್ನವಾಗಿಲ್ಲ. ಕಳೆದ ವರ್ಷ 30 ಸಾವಿರ ಕೋಟಿ ರೂ. ಸಾಲವನ್ನು ಕೇಂದ್ರ ಸರ್ಕಾರದಿಂದ ಪಡೆಯಲಾಗಿದೆ. ರಾಜ್ಯದ ಜನತೆ ನಾಳಿನ ಬಜೆಟ್ ಗೆ ಕಾತರದಿಂದ ಕಾಯುತ್ತಿದ್ದಾರೆ.