ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಮಾನವೀಯತೆ, ಸಮಾನತೆ ಹರಿಕಾರ, ಶ್ರೀನಾರಾಯಣ ಗುರುರವರ ಸ್ಮರಣಾರ್ಥ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಗಣರಾಜ್ಯೋತ್ಸವದ ವೇಳೆ ಕೇರಳದ ಟ್ಯಾಬ್ಲೋವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿ ಬಿಜೆಪಿ ಟೀಕೆಗೆ ಗುರಿಯಾಗಿತ್ತು. ಈಗ ಮರೆ ಮಾಚಲು ಕರ್ನಾಟಕ ಸರ್ಕಾರ ನಾರಾಯಣ ಗುರುಗಳ ಹೆಸರಿನಲ್ಲಿ ಶಾಲೆ ಆರಂಭಿಸಲು ಮುಂದಾಗಿದೆ.