ಗುಂಡ್ಲುಪೇಟೆ: ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಕಲ್ಲು ಬಂಡೆ ಕುಸಿತ, 10ಕ್ಕೂ ಅಧಿಕ ಕಾರ್ಮಿಕರು ಸಿಲುಕಿರುವ ಶಂಕೆ

Prasthutha|

ಗುಂಡ್ಲುಪೇಟೆ: ಕಲ್ಲು ಗಣಿಗಾರಿಕೆಯ ಕೋರೆಯ ಕಲ್ಲು ಗುಡ್ಡೆ ಕುಸಿದು ಹತ್ತಕ್ಕೂ ಹೆಚ್ಚು ಕಾರ್ಮಿಕರ ಅದರಡಿ ಸಿಲುಕಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸಮೀಪದ ಮಲೇನ್ ಪುರ ಮಾಡ್ರಳ್ಳಿ ಕಲ್ಲುಕೋರೆಯಲ್ಲಿ ಶುಕ್ರವಾರ ನಡೆದಿದೆ.

- Advertisement -

ಕುಸಿದ ಕಲ್ಲುಗುಡ್ಡೆಯಡಿ ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು ಸಿಲುಕಿಕೊಂಡಿವೆ. ಘಟನೆಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಕಲ್ಲು ಗಣಿಗಾರಿಕೆ ಸಂದರ್ಭ ಆಕಸ್ಮಿಕವಾಗಿ ಭಾರಿ ಗಾತ್ರದ ಕಲ್ಲು ಬಂಡೆಗಳ ಗುಡ್ಡೆ ಕುಸಿತ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ. ಕೇರಳ ಮೂಲದ ವ್ಯಕ್ತಿ ಇಲ್ಲಿ ಹಲವು ವರ್ಷಗಳಿಂದ ಗಣಿಗಾರಿಕೆ ನಡೆಸುತ್ತಿದ್ದಾರೆ. 50ಕ್ಕೂ ಹೆಚ್ಚು ಕಾರ್ಮಿಕರು ಕಲ್ಲು ಗಣಿಗಾರಿಕೆಯಲ್ಲಿ ನಿರತರಾಗಿದ್ದರು ಎನ್ನಲಾಗಿದೆ.

- Advertisement -

200ಕ್ಕೂ ಹೆಚ್ಚು ಅಡಿ ಆಳದಲ್ಲಿ ಕಲ್ಲುಗಣಿಗಾರಿಕೆ ನಡೆಯುತ್ತಿತ್ತು. ಕಲ್ಲುಬಂಡೆ ಕುಸಿಯುವ ಶಬ್ಧಕ್ಕೆ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದಾರೆ. ಕಲ್ಲು ಮಣ್ಣಿನ ಅಡಿಯಲ್ಲಿ ಸಿಲುಕಿರುವವರ ರಕ್ಷಣೆಗೆ ಅಧಿಕಾರಿಗಳು ತಕ್ಷಣ ಕ್ರಮಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.



Join Whatsapp