ವಾಯುಭಾರ ಕುಸಿತ ಎಫೆಕ್ಟ್; ಮುಂದಿನ ಎರಡು ದಿನ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Prasthutha|

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆಯು ತಿಳಿಸಿದೆ. 

- Advertisement -

ಮಾ.7ರಂದು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಾಗೂ ಪಶ್ಚಿಮ ಘಟ್ಟದ ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆ ಇದೆ. ಮಾರ್ಚ್ 8ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ಸುರಿಯುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.



Join Whatsapp