ಕೊಡಗು ಬ್ಲಡ್ ಡೋನರ್ಸ್ ನ ರಕ್ತದಾನ ಶಿಬಿರದಲ್ಲಿ ಕರವೇ ಕಾರ್ಯಕರ್ತರು ಭಾಗಿ

Prasthutha|

ಮಡಿಕೇರಿ: ಕೊಡಗು ಬ್ಲಡ್ ಡೋನರ್ಸ್ ಮತ್ತು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆ ಆಯೋಜಿಸಿದ ರಕ್ತದಾನ ಶಿಬಿರದಲ್ಲಿ ಕರವೇ ಕಾರ್ಯಕರ್ತರು ಭಾಗಿಯಾಗಿ ರಕ್ತದಾನ ಮಾಡಿದರು. ಬೆಳಿಗ್ಗೆ ರಕ್ತದಾನ ಶಿಬಿರಕ್ಕೆ ಸೋಮವಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಕರವೇ ಫ್ರಾನ್ಸಿಸ್ ಡಿಸೋಜಾ 16ನೇ ಬಾರಿಗೆ ರಕ್ತದಾನ ಮಾಡಿದರು. ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷ ರವಿಗೌಡ ಮತ್ತು ವೀರಾಜಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಮತ್ತು ವಿರಾಜಪೇಟೆ ಕರವೇ ಕಾರ್ಯಕರ್ತರು ಈ ರಕ್ತದಾನಕ್ಕೆ ಶಿಬಿರದಲ್ಲಿ ಭಾಗವಹಿಸಿದ್ದರು.



Join Whatsapp