ಜಿಲ್ಲಾ ಕೇಂದ್ರ, ಹೆದ್ದಾರಿ, ಪ್ರವಾಸಿ ತಾಣಗಳಲ್ಲೂ ವಿದ್ಯುತ್ ವಾಹನ ಚಾರ್ಜಿಂಗ್: ಸುನೀಲ್ ಕುಮಾರ್

Prasthutha|

ಬೆಂಗಳೂರು; ರಾಜ್ಯದಲ್ಲಿ ವಿದ್ಯುತ್ ವಾಹನಗಳ ರಿಚಾರ್ಜ್ ತಾಣಗಳ ಅಭಿವೃದ್ಧಿಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ವಿಧಾನಪರಿಷತ್ತಿನಲ್ಲಿಂದು ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಅವರು, ಈಗಾಲೇ ರಾಜ್ಯದಲ್ಲಿ 600ಕ್ಕೂ ಹೆಚ್ಚು ರಿಚಾರ್ಜ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲಾ ಕೇಂದ್ರ, ರಾಷ್ಟ್ರೀಯ ಹೆದ್ದಾರಿ ಹಾಗೂ ಪ್ರವಾಸಿ ತಾಣಗಳಲ್ಲೂ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದರು. ರಾಜ್ಯದಲ್ಲಿ ವಿದ್ಯುತ್ ವಾಹನಗಳ ಬಳಕೆ ಹೆಚ್ಚಿಸುವ ನಿಟ್ಟಿನಲ್ಲಿ ಖಾಸಗಿ ಕಂಪನಿಗಳೊಂದಿಗೆ ಚರ್ಚಿಸಲಾಗಿದೆ. ಸರ್ಕಾರದಲ್ಲಿಯೂ ವಿದ್ಯುತ್ ವಾಹನಗಳ ಬಳಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸುನೀಲ್ ಕುಮಾರ್ ಹೇಳಿದರು. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಾಗಿದ್ದು, ಉತ್ತಮ ನಿರ್ವಹಣೆ ಮಾಡಲಾಗುತ್ತಿದೆ. ಈ ವರ್ಷ 17 ಸಾವಿರದ 700 ಮೆಗಾವ್ಯಾಟ್ ಗೂ ಅಧಿಕ ವಿದ್ಯುತ್ ಬಳಕೆ ಮಾಡಲಾಗಿದೆ. ಇಲಾಖೆಗೆ ಯಾವುದೇ ನಷ್ಟ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಚ್ಚುವರಿ ವಿದ್ಯುತ್ ಮಾರಾಟದಿಂದ ರಾಜ್ಯಕ್ಕೆ 2 ಸಾವಿರ ಕೋಟಿ ರೂಪಾಯಿಗೂ ಅಧಿಕ ಲಾಭ ದೊರಕಿಸಿಕೊಡಲಾಗಿದೆ ಎಂದರು.



Join Whatsapp