ನವದೆಹಲಿ: ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಎ.ಕೆ.ಆ್ಯಂಟನಿ ಅವರು ತಮ್ಮ 52 ವರ್ಷಗಳ ಸುದೀರ್ಘ ರಾಜಕೀಯಕ್ಕೆ ನಿವೃತ್ತಿ ಘೋಷಿಸುವುದಾಗಿ ತಿಳಿಸಿದ್ದಾರೆ.
ಅವರು ತಮ್ಮ ರಾಜ್ಯಸಭಾ ಸ್ಥಾನಕ್ಕೆ ಮರು ಆಯ್ಕೆ ಬಯಸುವುದಿಲ್ಲ ಮತ್ತು ಏಪ್ರಿಲ್ ನಲ್ಲಿ ತಮ್ಮ ಅಧಿಕಾರಾವಧಿ ಮುಗಿದ ನಂತರ ತವರು ರಾಜ್ಯವಾದ ಕೇರಳಕ್ಕೆ ಮರಳುವುದಾಗಿ ಕಾಂಗ್ರೆಸ್ ನಾಯಕತ್ವಕ್ಕೆ ತಿಳಿಸಿದ್ದಾರೆ.
ಮಂಗಳವಾರ ತಿರುವನಂತಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ 81 ವರ್ಷ ವಯಸ್ಸಿನ ಆ್ಯಂಟನಿ, ರಾಜ್ಯಸಭೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೀಡಿದ ಅವಕಾಶಗಳಿಗಾಗಿ ಧನ್ಯವಾದ ಹೇಳಿದರು.
ಕೇರಳದ ಮೂರು ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 31 ರಂದು ಚುನಾವಣೆ ನಡೆಯಲಿದೆ