ನವದೆಹಲಿ: ಪಂಚ ರಾಜ್ಯ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿರುವಾಗಲೇ ಕಾಂಗ್ರೆಸ್ ಕಾರ್ಯಕರ್ತರು, ಇವಿಎಂ ಯಂತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ದೆಹಲಿಯ ಪಕ್ಷದ ಕಚೇರಿಯ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಪಂಚ ರಾಜ್ಯ ಚುನಾವಣೆಯ ಮತ ಎಣಿಕೆ ಕಾರ್ಯ ಗುರುವಾರ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದ್ದು, ಇತ್ತೀಚಿನ ಮಾಹಿತಿ ಪ್ರಕಾರ ಕಾಂಗ್ರೆಸ್ ಐದೂ ರಾಜ್ಯಗಳಲ್ಲಿ ಹಿನ್ನಡೆಯಲ್ಲಿದೆ.
ಉತ್ತರ ಪ್ರದೇಶದಲ್ಲಿ ಇವಿಎಂ ಯಂತ್ರಗಳಲ್ಲಿ ಅಕ್ರಮ ನಡೆಯುತ್ತಿದೆ. ಇವಿಎಂ ಕಳವು ಮಾಡಲಾಗಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಆರೋಪಿಸಿದ್ದರು. ಇದೀಗ ಕಾಂಗ್ರೆಸ್ ಕೂಡ ಇವಿಎಂ ದುರುಪಯೋಗ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆಗೆ ಇಳಿದಿದೆ.