ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಗಳಿಸುವ ತವಕದಲ್ಲಿದ್ದ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷಕ್ಕೆ ಸೋಲಾಗಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಎಸ್ಪಿ 111 ಸ್ಥಾನವನ್ನು ಪಡೆಯಲಷ್ಟೆ ಶಕ್ತವಾಗಿತ್ತು. ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಸೋತ ಹಿನ್ನೆಲೆಯಲ್ಲಿ ಅಖಿಲೇಶ್ ಯಾದವ್ ಜಯಗಳಿಸಿದ್ದ ಕರ್ಹಾಲ್ ಕ್ಷೇತ್ರವನ್ನು ಬಿಟ್ಟುಕೊಡಲಿದ್ದು, ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅಲ್ಲದೇ ಅಜಂಗಢ್ನ ಸಂಸದರಾಗಿಯೇ ಮುಂದುವರಿಯಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಚುನಾವಣೆಯಲ್ಲಿ ಸೋತ ಪರಿಣಾಮ ಸರ್ಕಾರ ರಚನೆ ಮಾಡಲು ನಮಗೆ ಸಾಧ್ಯವಿಲ್ಲ ಹೀಗಾಗಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗೆದ್ದಿರುವ ಕರ್ಹಾಲ್ ಕ್ಷೇತ್ರವನ್ನು ತೊರೆದು, ಸಂಸದರಾಗಿಯೇ ಮುಂದುವರಿಯಲಿದ್ದಾರೆ. ಆದರೆ ಆ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ, ಶೀಘ್ರದಲ್ಲೇ ಪ್ರಕಟಣೆ ಹೊರಬೀಳಲಿದೆ ಎಂದು ಎಸ್ಪಿ ಮುಖಂಡ ತಿಳಿಸಿರುವುದಾಗಿ ಟೈಮ್ಸ್ ಹೇಳಿದೆ.