ನವದೆಹಲಿ: ರೋಹಿಂಗ್ಯಾ ಮುಸ್ಲಿಮರನ್ನು ಭಾರತಕ್ಕೆ ಅಕಮ್ರವಾಗಿ ಸಾಗಿಸಲು ಯತ್ನಿಸಿದ್ದ ಆರೋಪದಲ್ಲಿ NIA 6 ಮಂದಿಯನ್ನು ಬಂಧಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ NIA ಅಧಿಕಾರಿಯೊಬ್ಬರು ಪ್ರಸಕ್ತ ಜಾಲ ಅಸ್ಸಾಮ್, ಪಶ್ಚಿಮ ಬಂಗಾಳ, ಮೇಘಾಲಯ ಸೇರಿದಂತೆ ದೇಶದ ಇತರೆ ಗಡಿ ಭಾಗದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ರೋಹಿಂಗ್ಯಾ ಮುಸ್ಲಿಮರನ್ನು ಭಾರತಕ್ಕೆ ರವಾನಿಸುವ ಜಾಲವೊಂದನ್ನು NIA ಭೇದಿಸಿದೆ ಎಂದು ಹೇಳಲಾಗಿದ್ದು, ಈ ಸಂಬಂಧ ಅಸ್ಸಾಮ್, ಮೇಘಾಲಯ ಮತ್ತು ಕರ್ನಾಟಕದ ಹಲವು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು NIA ಅಧಿಕಾರಿಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಂತ್ರಸ್ತ ರೋಹಿಂಗ್ಯಾ ಮುಸ್ಲಿಮರು ಭಾರತದಲ್ಲಿ ನೆಲೆಸುವಂತಾಗಲು ನಕಲಿ ಗುರುತಿನ ದಾಖಲೆಗಳನ್ನು ಸೃಷ್ಟಿಸಿ ಭಾರತಕ್ಕೆ ಕಳ್ಳಸಾಗಾಣೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ವಿರುದ್ಧ NIA ಅಧಿಕಾರಿಗಳು ಐಪಿಸಿ ಸೆಕ್ಷನ್ 370, 370 ಎ, NIA ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸದ್ಯ ಈ ಜಾಲದ ಮಾಸ್ಟರ್ ಮೈಂಡ್ ಅಹಮದ್ ಚೌಧರಿ ಎಂಬಾತ ಬೆಂಗಳೂರಿನಿಂದ ಅಕ್ರಮ ಸಾಗಾಣೆಯನ್ನು ನಿಯಂತ್ರಿಸುತ್ತಿದ್ದು, ದಂಧೆಯ ಇತರ ಸಕ್ರಿಯ ಸದಸ್ಯರು ದೇಶದ ವಿವಿಧ ಭಾಗಗಳಲ್ಲಿ ಹರಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.