ಬೆಂಗಳೂರು: ಯುದ್ಧ ಪೀಡಿತ ಉಕ್ರೇನ್ ದೇಶದಿಂದ ರಾಜ್ಯಕ್ಕೆ ವಾಪಾಸ್ ಬಂದ ಎಂ ಬಿ ಬಿ ಎಸ್ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಮುಂದುವರಿಕೆ ಆತಂಕ ಎದುರಿಸುತ್ತಿದ್ದರು. ಈ ವಿದ್ಯಾರ್ಥಿಗಳಿಗೆ ರಾಜ್ಯದಲ್ಲೇ ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.
ಈ ಬಗ್ಗೆ ವಿಧಾನಪರಿಷತ್ ನಲ್ಲಿ ಮಾತನಾಡಿದ ಅವರು, ಉಕ್ರೇನ್ ನಲ್ಲಿ ರಷ್ಯಾ ಶೆಲ್ ದಾಳಿಗೆ ನವೀನ್ ಸಾವನ್ನಪ್ಪಿದ್ದು ದುರಾದೃಷ್ಠಕರವಾಗಿದೆ. ಯುದ್ಧಭೂಮಿಯಲ್ಲಿ ಸಿಲುಕಿದ್ದಂತ 22 ಸಾವಿರ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ ಎಂದು ಹೇಳಿ, ಈ ಕಾರ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದರು
ಉಕ್ರೇನ್ ನಿಂದ ರಾಜ್ಯಕ್ಕೆ ಮರಳಿದಂತ ವಿದ್ಯಾರ್ಥಿಗಳು ಶಿಕ್ಷಣ ಮುಂದುವರೆಸೋ ಅಂತ್ರದಲ್ಲಿದ್ದಾರೆ. ಅವರ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಅಲ್ಲದೇ ಮೆಡಿಕಲ್ ಶುಲ್ಕ ಕಡಿಮೆ ಮಾಡುವ ಬಗ್ಗೆಯೂ ಚರ್ಚೆಯಾಗುತ್ತಿದೆ. ಯಾವುದೇ ತೊಂದರೆಯಾಗದಂತೆ ಉಕ್ರೇನ್ ನಿಂದ ರಾಜ್ಯಕ್ಕೆ ಬಂದಂತ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.