ರಸ್ತೆ ಗುಂಡಿಗೆ ಬಿದ್ದು ಯುವಕ ಸಾವು: ಐದು ಎಫ್ಐಆರ್ ದಾಖಲು

Prasthutha|

ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು ಯುವಕ ಮೃತಪಟ್ಟಿರುವ ಸಂಬಂಧ ಘಟನೆ ಸಂಬಂಧ ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇದಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಐದು ಪ್ರಕರಣ ದಾಖಲು ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.

- Advertisement -

ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಗುಂಡಿಗೆ ಯುವಕ ಸಾವು ಘಟನೆ ಆಗಬಾರದಿತ್ತು. ಆದರೆ, ನಡೆದುಹೋಗಿದೆ. ಒಟ್ಟಿನಲ್ಲಿ ಜಲಮಂಡಳಿ ತಪ್ಪಿನಿಂದ ಇಂತಹ ಅನಾಹುತ ಆಗಿದೆ ಎಂದರು.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬಿಬಿಎಂಪಿಗೆ ಮಾಹಿತಿ ನೀಡದೆ ರಸ್ತೆಯ ಅಗೆದಿದ್ದರಿಂದ ಇಂತಹ ಅನಾಹುತ ಆಗಿದೆ. ಇನ್ನು ಈಗಾಗಲೇ ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇಂತಹ ಸಂಸ್ಥೆಗಳ ವಿರುದ್ಧ ಐದು ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿಸಿದರು.

- Advertisement -

ಮೃತ ಯುವಕನಿಗೆ ಪರಿಹಾರ ವಿಚಾರದ  ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನಿನಲ್ಲಿ ಅವಕಾಶವಿದ್ದರೆ ಪರಿಹಾರದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಇಂದಿರಾ ಕ್ಯಾಂಟೀನ್ ನಡೆಸಲು ಸರ್ಕಾರದಿಂದ ಅನುದಾನ ಬಂದಿಲ್ಲ. ಬಿಬಿಎಂಪಿ ಬಜೆಟ್ ನಲ್ಲೇ ಅನುದಾನ ಮೀಸಲಿಡುವ ಬಗ್ಗೆ ಚರ್ಚೆ ನಡೆದಿದೆ ಎಂದು ವಿವರಿಸಿದರು.

ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಅನುದಾನ ಮೀಸಲಿಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಯಾವ ಮಾದರಿಯಲ್ಲಿ ಕ್ಯಾಂಟೀನ್ ನಡೆಸಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಕ್ಯಾಂಟೀನ್ ನಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವ ನಿಟ್ಟಿನಲ್ಲೂ ಚರ್ಚೆ ಆಗಿದ್ದು, ಮುಂದಿನ ದಿನಗಳಲ್ಲಿ ಆಹಾರದ ಗುಣಮಟ್ಟ ಕಾಪಾಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.



Join Whatsapp