ಪಂಜಾಬ್: ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿಯೋಜಿತ ಮುಖ್ಯಮಂತ್ರಿ ಭಗವಂತ್ ಮಾನ್

Prasthutha|

ಅಮೃತಸರ: ಪಂಜಾಬ್’ನ ನಿಯೋಜಿತ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಸಂಸದ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.

- Advertisement -

ಸಂಗ್ರೂರ್ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾದ ಮಾನ್ ಅವರು ಪಾರ್ಲಿಮೆಂಟ್ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ.

ಪ್ರಸಕ್ತ ಮಾನ್ ಧುರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಪಂಜಾಬ್’ನ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ.

- Advertisement -

ಮಾರ್ಚ್ 16 ರಂದು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಸ್ವಗ್ರಾಮದಲ್ಲಿ 17 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅದ್ದೂರಿಯಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯದ ಸುಮಾರು 3 ಕೋಟಿ ಜನರನ್ನು ಆಹ್ವಾನಿಸಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಟ್ವೀಟ್ ನಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ಅದ್ದೂರಿಯಾಗಿ ನಡೆಯುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.



Join Whatsapp