ನೈಸರ್ಗಿಕ ಸಾವುಗಳನ್ನು ರಾಜಕೀಯಗೊಳಿಸುತ್ತಿದೆ: ಟಿಡಿಪಿ ವಿರುದ್ಧ ಜಗನ್ ಮೋಹನ್ ರೆಡ್ಡಿ ಆರೋಪ

Prasthutha|

ಅಮರಾವತಿ: ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ಪಟ್ಟಣದಲ್ಲಿ ನಡೆದ ಸಾವುಗಳನ್ನು ವಿರೋಧ ಪಕ್ಷ ತೆಲುಗು ದೇಶಂ (ಟಿಡಿಪಿ) ರಾಜಕೀಯಗೊಳಿಸುತ್ತಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

- Advertisement -

ಪ್ರತಿಪಕ್ಷಗಳು ಅಕ್ರಮ ಮದ್ಯದ ಬಗ್ಗೆ ಸುಳ್ಳು ಪ್ರಚಾರ ಮಾಡುವುದನ್ನು ಬಿಡಬೇಕು ಎಂದಿದ್ದಾರೆ.

ವಿಧಾನಸೌಧದಲ್ಲಿ ಬಜೆಟ್ ಮೇಲಿನ ಸಾಮಾನ್ಯ ಚರ್ಚೆ ಆರಂಭಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ, ‘‘ನಗರ ವ್ಯಾಪ್ತಿಯಲ್ಲಿ 18 ಸಾವುಗಳು ದಾಖಲಾಗಿವೆ. ಸಾವಿನ ಪ್ರಮಾಣವು ದೇಶಾದ್ಯಂತ ಮತ್ತು ನಮ್ಮ ರಾಜ್ಯದಲ್ಲಿಯೂ ಸಹ 2 ಪ್ರತಿಶತ ಎಂದು ಅಂದಾಜಿಸಲಾಗಿದೆ, ಅಂದರೆ ಅನಾರೋಗ್ಯ, ವೃದ್ಧಾಪ್ಯ ಅಥವಾ ಅಪಘಾತಗಳಿಂದ ಕನಿಷ್ಠ 90 ಜನರು ಸ್ವಾಭಾವಿಕವಾಗಿ ಸಾಯುತ್ತಾರೆ. ಟಿಡಿಪಿಯು ಸತ್ಯವನ್ನು ತಿರುಚಿ ಸಹಜ ಸಾವುಗಳನ್ನು ರಾಜಕೀಯಗೊಳಿಸುತ್ತಿದೆ ಎಂದು ಅವರು ಆರೋಪಿಸಿದರು.

- Advertisement -

ರಾಜ್ಯದಲ್ಲಿ ಅಕ್ರಮ ಮದ್ಯ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಆದೇಶ ನೀಡಲಾಗಿದೆ. ಅಕ್ರಮ ಮದ್ಯದಲ್ಲಿ ತೊಡಗಿರುವವರ ವಿರುದ್ಧ 13,000 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಿಎಂ ಹೇಳಿದರು.



Join Whatsapp