ಹಿಂದುತ್ವ ಅಜೆಂಡಾಗಳನ್ನು ನ್ಯಾಯಾಂಗದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ: ಅಬ್ದುಲ್ ಮಜೀದ್

Prasthutha|

ಬೆಂಗಳೂರು: ಹಿಂದುತ್ವ ಅಜೆಂಡಾಗಳನ್ನು ಇಂದು ನ್ಯಾಯಾಂಗದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಬಾಬರಿ ಅಥವಾ ಸ್ಕಾರ್ಫ್ ವಿಚಾರವೇ ಆಗಿರಬಹುದು. ಮುಸ್ಲಿಮರ ಧಾರ್ಮಿಕ ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಹೇಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಎಂಬುದಕ್ಕೆ ಇವು ಸ್ಪಷ್ಟ ನಿದರ್ಶನಗಳು. ಈ ಅನ್ಯಾಯದ ತೀರ್ಪನ್ನು ಸಂವಿಧಾನಪ್ರೇಮಿಗಳು ಒಂದಾಗಿ ಪ್ರಶ್ನಿಸಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಪ್ರತಿಕ್ರಿಯಿಸಿದ್ದಾರೆ.

- Advertisement -

ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಅವರು ಟ್ವೀಟ್ ಮೂಲಕ ಈ ಪ್ರತಿಕ್ರಿಯೆ ನೀಡಿದ್ದಾರೆ.

ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಟ್ವೀಟ್ ಮಾಡಿ,  ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗವಲ್ಲವೆಂಬುದನ್ನು ಹೈಕೋರ್ಟ್ ನಿರ್ಧರಿಸಿರುವುದು ದುಃಖಕರ ಹಾಗೂ ಒಪ್ಪಲು ಸಾಧ್ಯವಿಲ್ಲ. ನ್ಯಾಯಕ್ಕಾಗಿರುವ ಹೋರಾಟ ಮುಂದುವರಿಯುವುದು ಎಂದು ತಿಳಿಸಿದ್ದಾರೆ.



Join Whatsapp