ಹೈಕೋರ್ಟ್ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದೆ: ಟ್ವೀಟ್ ಗಳ ಸುರಿಮಳೆಗೈದ ಉವೈಸಿ

Prasthutha|

ನವದೆಹಲಿ: ಹಿಜಾಬ್ ಗೆ ಸಂಬಂಧಿಸಿದ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದ್ದು, ಧಾರ್ಮಿಕ ಆಚರಣೆಯನ್ನು ನಿಷೇಧಿಸಲಾಗಿದೆ. ಆರ್ಟಿಕಲ್ 15 ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ. ಇದು ಅದರ ಉಲ್ಲಂಘನೆಯಲ್ಲವೇ? ಎಂದು ಸಂಸದ ಅಸಾದುದ್ದೀನ್ ಉವೈಸಿ ಪ್ರಶ್ನಿಸಿದ್ದಾರೆ.

- Advertisement -

ಹಿಜಾಬ್‌ ಸಂಬಂಧ ಹೈಕೋರ್ಟ್‌ ತೀರ್ಪು ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು,  ಕರ್ನಾಟಕ ಹೈಕೋರ್ಟ್‌ ನೀಡಿರುವ ತೀರ್ಪನ್ನು ನಾನು ಒಪ್ಪುವುದಿಲ್ಲ. ಕೋರ್ಟ್‌ ತೀರ್ಪನ್ನು ವಿರೋಧಿಸುವುದು ನನ್ನ ಹಕ್ಕು. ಹಿಜಾಬ್‌ ಪರ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂಬ ಭರವಸೆ ಇದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.


ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ಮಾತ್ರವಲ್ಲ ಇತರೆ ಧಾರ್ಮಿಕ ಗುಂಪುಗಳ ಸಂಘಸಂಸ್ಥೆಗಳು ಸಹ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲಿವೆ ಎಂದು ಹೇಳಿದರು.

- Advertisement -

“ಸಂವಿಧಾನದ ಪೀಠಿಕೆಯು ಒಬ್ಬನಿಗೆ ಆಲೋಚನೆ, ಅಭಿವ್ಯಕ್ತಿ, ಧಾರ್ಮಿಕ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವಿದೆ ಎಂದು ಹೇಳುತ್ತದೆ. ನನ್ನ ತಲೆಯನ್ನು ಮುಚ್ಚಿಕೊಳ್ಳುವುದು ಅತ್ಯಗತ್ಯ ಎಂಬುದು ನನ್ನ ಧಾರ್ಮಿಕ ನಂಬಿಕೆಯಾಗಿದ್ದರೆ, ನಾನು ಸೂಕ್ತವೆಂದು ಭಾವಿಸಿದಂತೆ ಅದನ್ನು ವ್ಯಕ್ತಪಡಿಸಲು ನನಗೆ ಹಕ್ಕಿದೆ. ಧರ್ಮನಿಷ್ಠ ಮುಸಲ್ಮಾನರಿಗೆ ಹಿಜಾಬ್ ಕೂಡ ಒಂದು ಆರಾಧನೆಯ ಕ್ರಿಯೆಯಾಗಿದೆ” ಎಂದು ಅವರು ಹೇಳಿದ್ದಾರೆ.



Join Whatsapp