ಹಿಜಾಬ್ ತೀರ್ಪು ವಿರೋಧಿಸಿ ತಮಿಳುನಾಡಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

Prasthutha|

ಚೆನ್ನೈ: ಹಿಜಾಬ್‌ ವಿಚಾರವಾಗಿ ಹೈಕೋರ್ಟ್‌ ನೀಡಿರುವ ತೀರ್ಪನ್ನು ವಿರೋಧಿಸಿ ತಮಿಳುನಾಡಿನ ಚೆನ್ನೈನಲ್ಲಿರುವ ದಿ ನ್ಯೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಸಾವಿರಾರು ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದು, ಬಿತ್ತಿಪತ್ರಗಳಲ್ಲಿ, ‘ಸಾಂಸ್ಕೃತಿಕ ನರಮೇಧದ ವಿರುದ್ಧ ಹೋರಾಟ’ ಮತ್ತು ‘ನಾವು ಹಿಜಾಬ್ ಅನ್ನು ಬೆಂಬಲಿಸುತ್ತೇವೆ’ ಎಂದು ಬರೆಯಲಾಗಿದೆ.

ರಾಜ್ಯ ಹೈಕೋರ್ಟ್ ಮಂಗಳವಾರದಂದು ಹಿಜಾಬ್‌ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದ್ದು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿದೆ.

- Advertisement -

ಮುಸ್ಲಿಮ್ ಮಹಿಳೆಯರ ಧಾರ್ಮಿಕ ಹಕ್ಕಾಗಿರುವ ಹಿಜಾಬ್ ಕುರಿತಾಗಿ ಹೈಕೋರ್ಟ್ ಇಂದು ವಿಚಿತ್ರ ತೀರ್ಪು ನೀಡಿತ್ತು. ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗವಲ್ಲ ಎಂದಿತ್ತು. “ಶಾಲಾ ಸಮವಸ್ತ್ರದ ಸೂಚನೆಯನ್ನು ವಿರೋಧಿಸಲು ಸಾಧ್ಯವಿಲ್ಲ, ಅದು ಸಮಂಜಸವಾದ ನಿರ್ಬಂಧವಾಗಿದೆ” ಎಂದು ಅವರು ತೀರ್ಪಿನಲ್ಲಿ ಹೇಳಿದ್ದಾರೆ.



Join Whatsapp