ಹಿಜಾಬ್‌ ಬ್ಯಾನ್‌ ಮಾಡುವ ಅಗತ್ಯ ಇರಲಿಲ್ಲ: ಬಿಜೆಪಿ ಸಂಸದೆ ಹೇಮಾಮಾಲಿನಿ

Prasthutha|

ಬೆಂಗಳೂರು : ಹಿಜಾಬ್ ಕುರಿತಾಗಿ ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪು ಬಗ್ಗೆ ಬಾಲಿವುಡ್ ನಟಿ ಹಾಗೂ ಭಾರತೀಯ ಜನತಾ ಪಾರ್ಟಿಯ ಸಂಸದೆಯೂ ಆಗಿರುವ ಹೇಮಾಮಾಲಿನಿ ಪ್ರತಿಕ್ರಿಯಿಸಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ಅನುಮತಿ ನಿರಾಕರಿಸುವ ಅಗತ್ಯವಿರಲಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -

ಕರ್ನಾಟಕ ಹೈಕೋರ್ಟ್ ನಿನ್ನೆ ಹಿಜಾಬ್‌ ಪ್ರಕರಣದ ತೀರ್ಪು ನೀಡಿತ್ತು. ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಹಾಗೂ ಕೇಸರಿ ಶಾಲು ಬಳಸಲು ಅನುಮತಿ ಇಲ್ಲ. ಅಗತ್ಯವಾಗಿ ಸಮವಸ್ತ್ರ ನಿಯಮವನ್ನು ಪಾಲಿಸಬೇಕು ಎಂದು ಕೋರ್ಟ್ ತೀರ್ಪು ನೀಡಿತ್ತು. ಈ ಹಿಜಾಬ್ ಪ್ರಕರಣ ಭಾರಿ ವಿವಾದಕ್ಕೆ ಕಾರಣವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು.

ಆದರೆ ನಿನ್ನೆ ತೀರ್ಪು ನೀಡಿದ ಹೈಕೋರ್ಟ್ ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ ಎಂದು ಹೇಳಿತ್ತು. ಅಲ್ಲದೇ ಶಾಲೆಗೆ ಕೇಸರಿ ಶಾಲು, ಹಿಜಾಬ್ ಆಗಲಿ ಯಾವುದೂ ಧರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಸರ್ಕಾರದ ಆದೇಶವನ್ನು ಕೋರ್ಟ್‌ ಎತ್ತಿ ಹಿಡಿದಿದೆ .ಹಿಜಾಬ್ ಇಲ್ಲದೆ ಕಾಲೇಜಿಗೆ ಹೋಗೋದಿಲ್ಲ. ನಮ್ಮ ಹಕ್ಕು ಪಡೆಯೋವರೆಗೂ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ವಿದ್ಯಾರ್ಥಿನಿಯರು ಸ್ಪಷ್ಟಪಡಿಸಿದರು.



Join Whatsapp