ಮಂಗಳೂರು: ಹಿಜಾಬ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದ ಮುಸ್ಲಿಮ್ ಸಂಘಟನೆಗಳು ಬಂದ್’ಗೆ ಕರೆ ನೀಡಿದ್ದು,ಇದೀಗ ಮಂಗಳೂರು, ಉಡುಪಿ ಸೇರಿದಂತೆ ಇಡೀ ರಾಜ್ಯದ ಪ್ರಮುಖ ಮುಸ್ಲಿಂ ಸಂಘಟನೆಗಳು ಬೆಂಬಲ ಘೋಷಿಸಿವೆ.
ರಾಜ್ಯದ ಬಹುತೇಕ ಮುಸ್ಲಿಂ ವರ್ತಕರು ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ಸೂಚಿಸಿದ್ದು, ಬಸ್, ಆಟೋ ರಿಕ್ಷಾ, ಟ್ಯಾಕ್ಸಿಗಳು ಸಂಚಾರ ನಿಲ್ಲಿಸಿ ಬಂದ್’ಗೆ ಬೆಂಬಲ ಸೂಚಿಸಿವೆ.
ಮುಸ್ಲಿಮರು ಈ ಬಂದ್’ಗೆ ಹೆಚ್ಚು ಬೆಂಬಲ ವ್ಯಕ್ತಪಡಿಸಿರುವ ಕಾರಣ ಮುಸ್ಲಿಂ ಬಾಹುಳ್ಯ ಪ್ರದೇಶಗಳಾದ ಬೆಳ್ತಂಗಡಿ, ಪುತ್ತೂರು, ಉಳ್ಳಾಲ,ದೇರಳಕಟ್ಟೆ,ಫರಂಗಿಪೇಟೆ,ಉಪ್ಪಿನಂಗಡಿ ಇಂದು ಜನ ಸಂಚಾರವಿಲ್ಲದೆ ಖಾಲಿಯಾಗಿವೆ.
ಕೆಲವು ಕಡೆಗಳಲ್ಲಿನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು,ಕೊಡಗಿನ ಸುಂಟಿಕೊಪ್ಪ ಸೇರಿದಂತೆ ಹಲವು ಕಡೆಗಳಲ್ಲಿ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ
ಪುತ್ತೂರು, ಉಪ್ಪಿನಂಗಡಿಯಲ್ಲಿ ಬಂದ್ ಗೆ ಸಂಪೂರ್ಣ ಬೆಂಬಲ
ಪುತ್ತೂರು: ಹಿಜಾಬ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದ ಮುಸ್ಲಿಮ್ ಸಂಘಟನೆಗಳು ಬಂದ್’ಗೆ ಕರೆ ನೀಡಿದ್ದು, ಬಂದ್ ಗೆ ಪುತ್ತೂರು ಉಪ್ಪಿನಂಗಡಿಯಲ್ಲಿ ಉತ್ತಮ ಸ್ಪಂದನ ವ್ಯಕ್ತವಾಗಿದೆ.
ಮುಸ್ಲಿಂ ವರ್ತಕರು ಹಾಗೂ ವಾಹನ ಚಾಲಕರು ಬಂದ್ ಬೆಂಬಲ ವ್ಯಕ್ತಪಡಿಸಿ ಇಂದು ಪುತ್ತೂರಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದಾರೆ. ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲೂ ಎಲ್ಲಾ ಮುಸ್ಲಿಮರ ಅಂಗಡಿಗಳು ಮುಚ್ಚಲ್ಪಟ್ಟಿವೆ.