ವಿರಾಜಪೇಟೆ: ಹಿಜಾಬ್ ವಿಷಯದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕರ್ನಾಟಕದ ವಿವಿಧ ಮುಸ್ಲಿಂ ಸಂಘಟನೆಗಳು ಕರೆ ನೀಡಿದ ಬಂದ್ ಗೆ ಕೊಡಗಿನ ಹಲವು ಭಾಗಗಳಲ್ಲಿ ಬೆಂಬಲ ವ್ಯಕ್ತವಾಗಿದೆ.
ವಿರಾಜಪೇಟೆ, ಸಿದ್ದಾಪುರ, ಸುಂಟಿಕೊಪ್ಪ, ಪಾಲಿಬೆಟ್ಟ, ಕುಶಾಲನಗರ, ನೆಲ್ಯಹುದಿಕೇರಿ ಸೇರಿದಂತೆ ವಿವಿಧ ಭಾಗಗಳಲ್ಲಿ ಮುಸ್ಲಿಂ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಬೆಂಬಲ ಸೂಚಿಸಿದ್ದಾರೆ.